ಡಿಸಿ ಮನ್ನಾ ಭೂಮಿ ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿತರಿಸಲು ಒತ್ತಾಯ

dc manna
17/08/2022

ಮಂಗಳೂರಿನ ದೇರೆಬೈಲ್ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮೀಸಲಿಸಿರುವ ಡಿಸಿ ಮನ್ನಾ ಭೂಮಿಯನ್ನು ಸಮುದಾಯದ ಅರ್ಹ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯ ಅಭಿವೃದ್ಧಿ ಸಂಘ ಒತ್ತಾಯಿಸಿದೆ.‌

ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಈ ಒತ್ತಾಯ ಮಾಡಿರುವ ಸಂಘದ ಗೌರವಾಧ್ಯಕ್ಷ ಎ.ಚಂದ್ರ ಕುಮಾರ್, ಮಂಗಳೂರು ತಾಲೂಕಿನ ದೇರೆಬೈಲ್ ಗ್ರಾಮದ ಸರ್ವೇ ನಂ. 174 9ಎ, 175, 176 ಭೂಮಿ ಇತರ ಮೂಲಕ ದಾಖಲೆಯ ಪ್ರಕಾರ ಸರಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮೀಸಲಿರಿಸಿದೆ. ಈ ಜಮೀನು ಡಿ.ಸಿ. ಮನ್ನಾ ಭೂಮಿಯಾಗಿದೆ. ಜಮೀನನ್ನು ಮೂಲ ದಾಖಲೆಯಿಂದ ಹೊಸತಾಗಿ ಪಹಣಿಯಲ್ಲಿ ದಾಖಲೆ ಮಾಡುವಾಗ ಸರಕಾರಿ ಜಮೀನು ಎಂದು ದಾಖಲಿಸಲಾಗಿದೆ.

ಇದರಿಂದ ದಲಿತ ಕುಟುಂಬಗಳಿಗೆ ಅನ್ಯಾಯವಾಗಿದೆ. ಇಲ್ಲಿ ಇತರರಿಗೆ ವಾಸಿಸಲು ಅನುವು ಮಾಡಿಕೊಡಲಾಗಿದ. ಇನ್ನೊಂದು ಕಡೆ ಅರಣ್ಯ ಇಲಾಖೆಯವರು ಡಿಸಿ ಮನ್ನಾ ಭೂಮಿಯಲ್ಲಿ ಸಾವಿರಾರು ಎಕರೆ ಆಕ್ರಮಿಸಿ ಅಕೇಶಿಯಾ ಗಿಡವನ್ನು ನೆಟ್ಟಿದ್ದಾರೆ. ಹಾಗಾಗಿ ಆ ಜಮೀನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಿ ಪರಿಶಿಷ್ಟರಿಗೆ ವಿತರಿಸಬೇಕು ಎಂದು ಆಗ್ರಹಿಸಿದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version