ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನದಿಯಲ್ಲಿ ಪತ್ತೆ!

death
17/02/2024

ಚಿಕ್ಕಮಗಳೂರು: ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಹೇಮಾವತಿ ನದಿಯಲ್ಲಿ  ಪತ್ತೆಯಾಗಿದೆ.

ಮೂಡಿಗೆರೆ ತಾಲ್ಲೂಕಿನ ಕಿತ್ತಲೆಗಂಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಿತ್ತಲೆಗಂಡಿ ಗ್ರಾಮದ ಕೂಲಿ ಕಾರ್ಮಿಕ ಶಂಕರ್ (36 ವರ್ಷ) ಎಂಬ ವ್ಯಕ್ತಿ ಗುರುವಾರದಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಆದರೆ ಇಂದು ಬೆಳಿಗ್ಗೆ ಕಿತ್ತಲೆಗಂಡಿ ಹೇಮಾವತಿ ಸೇತುವೆಯಿಂದ ಸ್ವಲ್ಪ ಮೇಲ್ಬಾಗದಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿತ್ತು. ನಂತರ ಪರಿಶೀಲಿಸಲಾಗಿ ಅದು ನಾಪತ್ತೆಯಾಗಿದ್ದ ಶಂಕರ್ ಅವರ ಶವವಾಗಿತ್ತು.

ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಸ್ಥಳೀಯರ ಮತ್ತು ಸಮಾಜ ಸೇವಕ ಫಿಶ್ ಮೋಣು ತಂಡದವರ ಸಹಾಯದಿಂದ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದಾರೆ.
ಶವವನ್ನು ಮೂಡಿಗೆರೆ ಎಂ.ಜಿ.ಎಂ. ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಮೃತ ಶಂಕರ್ ವಿವಾಹಿತರಾಗಿದ್ದು, ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಇವರು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು.

ಈ ಸಾವು ಹೇಗೆ ಸಂಭವಿಸಿದೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

Exit mobile version