ನಾಪತ್ತೆಯಾಗಿದ್ದ ಮೊಯ್ದಿನ್ ಬಾವ ಸಹೋದರನ ಮೃತದೇಹ ಪತ್ತೆ
ಮಂಗಳೂರು: ಮಾಜಿ ಕಾಂಗ್ರೆಸ್ ಶಾಸಕ ಮೊಯ್ದಿನ್ ಬಾವ ಅವರ ಸಹೋದರ ಮುಮ್ತಾಝ್ ಅಲಿ ಅವರು ನಾಪತ್ತೆಯಾದ ಘಟನೆ ನಡೆದಿತ್ತು. ಇದೀಗ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ.
ಕೂಳೂರಿನ ಸೇತುವೆಯ ಸಮೀಪವೇ ಇರುವ ಮತ್ತೊಂದು ಸೇತುವೆ ಬಳಿ ಇಂದು ನೀರಿನಲ್ಲಿ ವ್ಯಕ್ತಿಯೊಬ್ಬರ ತಲೆ ಕಾಣುತ್ತಿತ್ತು. ಸಮೀಪಕ್ಕೆ ತೆರಳಿದಾಗ ಇದು ಮುಮ್ತಾಜ್ ಅಲಿ ಅವರ ದೇಹ ಎನ್ನುವುದು ತಿಳಿದು ಬಂದಿದೆ.
ಸದ್ಯ ಮೃತದೇಹವನ್ನು ಮೇಲೆತ್ತಲಾಗಿದೆ. ಮುಮ್ತಾಝ್ ಅಲಿ ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ಯಾಂಶ ಬಯಲಾಗಬೇಕಿದೆ.
ಭಾನುವಾರ ಬೆಳಗ್ಗಿನ ಜಾವ 3 ಗಂಟೆಗೆ ಯಾರಿಗೂ ತಿಳಿಯದಂತೆ ತನ್ನ ಬಿಎಂಡಬ್ಲ್ಯೂ ಕಾರನ್ನು ಚಲಾಯಿಸಿಕೊಂಡು ಕದ್ರಿಯ ತನ್ನ ಮನೆಯಿಂದ ಪಣಂಬೂರು ಬಳಿ ಬಂದಿದ್ದರು. ಅಲ್ಲಿಂದ ಕೂಳೂರು ಹೈವೆಗೆ ಬಂದಿದ್ದಾರೆ. ಕಾರು ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಅವರು ನಾಪತ್ತೆಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97