3:40 AM Sunday 14 - September 2025

ಡೆಡ್ಲಿ ಆಕ್ಸಿಡೆಂಟ್: ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರು

chikkamagaluru
13/12/2023

ಚಿಕ್ಕಮಗಳೂರು: ಓವರ್ ಟೇಕ್ ಮಾಡುವ ಭರದಲ್ಲಿ ಭೀಕರ ಅಪಘಾತವೊಂದು ನಡೆದ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ.

ವೇಗವಾಗಿ ನುಗ್ಗಿ ಬಂದ ಕಾರೊಂದು ಮುಂದಿದ್ದ ಕಾರನ್ನು ಓವರ್ ಟೇಕ್ ಮಾಡಲು ಯತ್ನಿಸಿದೆ. ಇದೇ ಸಂದರ್ಭದಲ್ಲಿ ರಸ್ತೆಯ ಬಲಭಾಗದಲ್ಲಿ ಸಂಚರಿಸುತ್ತಿದ್ದ ಸ್ಕೂಟಿಗೆ ಕಾರು ಡಿಕ್ಕಿಯಾಗಿದ್ದು, ಸ್ಕೂಟಿ ಸವಾರ ಡಿಕ್ಕಿಯ ರಭಸಕ್ಕೆ ಹಾರಿ ರಸ್ತೆಗೆ ಬಿದ್ದಿದ್ದಾನೆ. ಸ್ಕೂಟಿಗೆ ಡಿಕ್ಕಿ ಹೊಡೆದ ಬಳಿಕ ಕಾರು ಚಾಲಕ ತಿರುಗಿಯೂ ನೋಡದೇ ಸ್ಥಳದಿಂದ ಕಾರಿನೊಂದಿಗೆ ಪಾರಾರಿಯಾಗಿದ್ದಾನೆ.

ಸ್ಕೂಟಿ ಸವಾರ ಸಾವಿನಿಂದ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಈ ಅಪಘಾತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. 2 ದಿನಗಳ ಹಿಂದೆ ನಡೆದ ಘಟನೆ ಇದಾಗಿದೆ.
ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾರು ಚಾಲಕನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

Exit mobile version