ಒಂಟಿ ಜೀವನದಿಂದ ಬೇಸತ್ತ ಮಹಿಳೆ: ಡೆತ್ ನೋಟ್ ಬರೆದಿಟ್ಟ ಆತ್ಮಹತ್ಯೆಗೆ ಶರಣು
ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
30 ವರ್ಷದ ಬಿನ್ಸಿ ಶೈಜು ಥೋಮಸ್ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ವಿವಾಹಿತರಾಗಿದ್ದು, ಇವರ ಗಂಡ ಉದ್ಯೋಗದ ನಿಮಿತ್ತ ದುಬೈಯಲ್ಲಿದ್ದರು. ಹೀಗಾಗಿ ಬಿನ್ಸಿ ಅವರು ಮಗಳೊಂದಿಗೆ ಗಂಡನ ಮನೆಯಾದ ಹಂದಾಡಿ ಗ್ರಾಮದ ಬೇಳೂರುಜೆಡ್ಡು ಎಂಬಲ್ಲಿನ ಮನೆಯ 1 ನೇ ಮಹಡಿಯಲ್ಲಿ ಹಾಗೂ ಅವಳ ಅತ್ತೆ, ಮಾವ ಮನೆಯ ಕೆಳ ಅಂತಸ್ತಿನಲ್ಲಿ ವಾಸವಾಗಿದ್ದರು.
ಬಿನ್ಸಿ ಶೈಜು ಥೋಮಸ್ ಅವರು ಅ.26 ರಂದು ರಾತ್ರಿ ಇಲಿಪಾಷಣ ಸೇವಿಸಿ ಡೆತ್ ನೋಟ್ ಬರೆದಿಟ್ಟು ಯಾರಿಗೂ ಹೇಳದೆ ಮನೆಯಲ್ಲಿದ್ದರು. ಅ.31 ರಂದು ಮನೆಯಲ್ಲಿ ತೀವ್ರ ವಾಂತಿ ಭೇದಿಯಿಂದ ಅಸ್ವಸ್ಥಗೊಂಡು ಬಳಲುತ್ತಿದ್ದವರನ್ನು ಚಿಕಿತ್ಸೆಗಾಗಿ ಬ್ರಹ್ಮಾವರದ ಆಸ್ಪತ್ರೆಗೆ ದಾಖಲು ಮಾಡಿದ್ದರು. ಬಳಿಕ ವೈದ್ಯರ ಸಲಹೆಯಂತೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಿನ್ಸಿ ಶೈಜು ಥೋಮಸ್ ಅವರು ಚಿಕಿತ್ಸೆ ಫಲಕಾರಿಯಾಗದೇ ನ.5 ರಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅದರಂತೆ ಇವರು ಒಬ್ಬರೇ ಮಗುವಿನೊಂದಿಗೆ ಒಂಟಿಯಾಗಿ ವಾಸವಾಗಿರುವ ಕೊರಗಿನಲ್ಲಿ ಇಲಿ ಪಾಷಣ ಸೇವಿಸಿ ಆರೋಗ್ಯ ತೀರಾ ಹದಗೆಟ್ಟು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಮೃತರ ತಾಯಿ ಲಾಲಿ ವೆಲ್ಸಿತಾ ಅವರು ನೀಡಿದ ಮಾಹಿತಿಯಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka