5 ಹುಲಿಗಳ ಸಾವು ಪ್ರಕರಣ: ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳು ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವಿಷಪ್ರಾಶನವೇ ಹುಲಿಗಳ ಸಾವಿಗೆ ಕಾರಣ ಎಂಬುದು ದೃಢಪಟ್ಟಿದೆ.
ಮೃತ ತಾಯಿ ಹುಲಿ 8 ವರ್ಷ ವಯಸ್ಸಿನದ್ದಾಗಿದೆ. ಮರಿಗಳು ಸುಮಾರು 10 ತಿಂಗಳಾಗಿರಬಹುದು ಎಂದು ಚಾಮರಾಜನಗರ ಸಿಸಿಎಫ್ ಹೀರಾಲಾಲ್ ತಿಳಿಸಿದ್ದಾರೆ.
ಘಟನೆ ಸಂಬಂಧ ಐವರು ದನಗಾಹಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಲಿಗಳ ಕಳೇಬರ ಪತ್ತೆಯಾದ ಅಣತಿ ದೂರದಲ್ಲೇ ಹಸುವಿನ ಮೃತದೇಹ ಸಿಕ್ಕಿದ್ದು, ಕ್ರಿಮಿನಾಶಕ ಸಿಂಪಡಣೆ ಮಾಡಿರುವುದು ತಿಳಿದುಬಂದಿದೆ.
ವಿಷ ಹಾಕಿದ್ದ ಹಸುವನ್ನು ತಿಂದು ಹುಲಿಗಳು ಅಸುನೀಗಿರುವುದು ದೃಢವಾಗಿದ್ದು, ಹಸು ಬೇಟೆಯಾಡಿದ ಕೋಪಕ್ಕೆ ದನಗಾಹಿಗಳೇ ವಿಷ ಇಟ್ಟರೇ, ಇಲ್ಲವೇ ಬೇಟೆಗಾರರು ವಿಷ ಇಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD