ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದ ಹಾಲಿ ಸಂಸದ ಸಾವು: ಟಿಕೆಟ್ ಸಿಗದ ಹಿನ್ನೆಲೆ ಹತಾಶರಾಗಿದ್ದ ಸಂಸದ

ganesh moorthy
28/03/2024

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ನಿರಾಸೆಯಿಂದ  ಮಾತ್ರೆ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ್ದ  ತಮಿಳುನಾಡಿನ ಈರೋಡ್ ಸಂಸದ ಗಣೇಶಮೂರ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಗಣೇಶಮೂರ್ತಿ ಅವರು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮುಂಜಾನೆ 5 ಗಂಟೆಯ ಸುಮಾರಿಗೆ ಹಠಾತ್ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಈರೋಡ್ ಕ್ಷೇತ್ರದಿಂದ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಗಣೇಶಮೂರ್ತಿ ಸ್ಪರ್ಧಿಸಿ ಸಂಸದರಾಗಿದ್ದರು.

2024ರಲ್ಲಿ ಮತ್ತೊಮ್ಮೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಡಿಎಂಕೆ ಯಾವುದೇ ಪಕ್ಷಗಳ ಜೊತೆಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆ ಗಣೇಶಮೂರ್ತಿಗೆ ಟಿಕೆಟ್ ಸಿಗಲಿಲ್ಲ. ಇದರಿಂದ ಹತಾಶರಾದ ಅವರು ಮಾರ್ಚ್ 24ರಂದು ಮಾತ್ರೆ ಸೇವಿಸಿ ಅಸ್ವಸ್ಥರಾಗಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version