ಬಿಳಿಗಿರಿರಂಗನ ಬೆಟ್ಟದಲ್ಲಿ ಕೂಡು ದಂತದ ಕಾಡಾನೆ ಸಾವು - Mahanayaka
12:31 PM Wednesday 17 - September 2025

ಬಿಳಿಗಿರಿರಂಗನ ಬೆಟ್ಟದಲ್ಲಿ ಕೂಡು ದಂತದ ಕಾಡಾನೆ ಸಾವು

biligirirangana hill
05/11/2024

ಚಾಮರಾಜನಗರ: ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೂಡು ದಂತದ ಕಾಡಾನೆ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.


Provided by

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ವಲಯದ ಕಡಿತಾಳ‌ಕಟ್ಟೆ ಗಸ್ತಿನ ವೇಳೆ ಆನೆ ಮೃತಪಟ್ಟಿರುವುದು ತಿಳಿದು ಬಂದಿದೆ.

ಕಾಡಾನೆ ಸಾವಿನ ಹಿನ್ನೆಲೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪಶುವೈದ್ಯ ಡಾ.ವಾಸಿಂ ಮಿರ್ಜಾ ಮರಣೋತ್ತರ ಪರೀಕ್ಷೆ ನಡೆಸಿದರು. ಕಾಡಾನೆ ಸ್ವಾಭಾವಿಕವಾಗಿ ಸಾವನ್ನಪ್ಪಿದೆ ಎಂದು ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿದೆ.

ಈ ಕಾಡಾನೆಗೆ 50ರಿಂದ 55 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ.  ಆಹಾರ ಅರಸಿ ಈ ಕಾಡಾನೆ ಬಿಳಿಗಿರಿರಂಗನ ಬೆಟ್ಟದ ಮುಖ್ಯರಸ್ತೆ, ಬಂಗಲೆ ಪೋಡು ಸೇರಿದಂತೆ ವಿವಿಧೆಡೆ ಸಂಚರಿಸುತ್ತಿತ್ತು.

ಇದೇ ಕಾಡಾನೆ ಕೆಲವು ತಿಂಗಳ ಹಿಂದೆ ಬಿಳಿಗಿರಿರಂಗನ ಬೆಟ್ಟದ ಪ್ರವಾಸೋದ್ಯಮ ಇಲಾಖೆಯ ಹೊಟೇಲ್ ಗೆ ನುಗ್ಗಿತ್ತು. ಆದರೆ ಈವರೆಗೆ ಈ ಕಾಡಾನೆ ಯಾವುದೇ ಜೀವಹಾನಿ ಮಾಡಿಲ್ಲ. ಈ ಆನೆಯ ಸಾವಿಗೆ ಪರಿಸರ ಪ್ರೇಮಿಗಳು ಮರುಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ