10:29 AM Tuesday 14 - October 2025

ಸಾವಿನ ಸಿರಪ್: 11 ಮಕ್ಕಳ ಸಾವಿನ ನಂತರ ಶಿಫಾರಸು ಮಾಡಿದ ವೈದ್ಯನ ಬಂಧನ

dr praveen sony
05/10/2025

ನವದೆಹಲಿ: ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸರಣಿ ಸಾವಿನ ಪ್ರಕರಣ ಸಂಬಂಧ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದ ಡಾ.ಪ್ರವೀಣ್ ಸೋನಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪ್ರವೀಣ್ ಸೋನಿ ಅವರು ಪರಾಸಿಯಾದಲ್ಲಿರುವ ತಮ್ಮ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಹಲವಾರು ಮಕ್ಕಳಿಗೆ ‘ಕೋಲ್ಟಿಫ್’ ಕೆಮ್ಮಿನ ಸಿರಪ್ ಅನ್ನು ಶಿಫಾರಸು ಮಾಡಿದ್ದರು ಎಂದು ತಿಳಿದುಬಂದಿದೆ.

ಇದೇ ಪ್ರಕರಣ ಸಂಬಂಧ ಮಧ್ಯಪ್ರದೇಶ ಪೊಲೀಸರು ಶನಿವಾರ ಡಾ. ಸೋನಿ ಮತ್ತು ಕೆಮ್ಮಿನ ಸಿರಪ್ ತಯಾರಿಸಿದ ತಮಿಳುನಾಡು ಮೂಲದ ಶ್ರೀಸಾನ್‌ ಫಾರ್ಮಾಸ್ಯುಟಿಕಲ್ಸ್‌ ನ ನಿರ್ವಾಹಕರ ವಿರುದ್ಧ ಎಫ್‌ ಐಆರ್ ದಾಖಲಿಸಿದ್ದರು.

ಸೋನಿ ಮತ್ತು ಕೆಮ್ಮಿನ ಸಿರಪ್ ತಯಾರಕರ ವಿರುದ್ಧ ಭಾರತದ ಡ್ರಗ್ಸ್ ಮತ್ತು ಕಾಸೆಟಿಕ್ಸ್ ಕಾಯ್ದೆಯ ಸೆಕ್ಷನ್ 27(ಎ) ಮತ್ತು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 105 ಮತ್ತು 276ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಕೇರಳದಲ್ಲಿ ‘ಕೋಲಿಫ್’ ಸಿರಪ್ ಮಾರಾಟವನ್ನು ನಿಷೇಧಿಸಲಾಗಿದೆ. ಮಾರುಕಟ್ಟೆಯಿಂದ ಈ ಸಿರಪ್ ಅನ್ನು ಹಿಂಪಡೆಯುವಂತೆಯೂ ಸೂಚಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version