9:39 PM Thursday 4 - December 2025

ಡಿಸೆಂಬರ್ 5ರಂದು ಕರ್ನಾಟಕ ಬಂದ್

21/11/2020

ಬೆಂಗಳೂರು: ಮರಾಠ ಸಮುದಾಯ ನಿಗಮ ಸ್ಥಾಪನೆ ನಿರ್ಧಾರವನ್ನು ವಿರೋಧಿಸಿ ಡಿಸೆಂಬರ್ 5ರಂದು ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ನೇತೃತ್ವದಲ್ಲಿ  ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಸರ್ಕಾರದ ನಿಲುವಿನ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಯಿತು. ಇದೇ ಸಂದರ್ಭದಲ್ಲಿ ಡಿ.5ರಂದು ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಯಿತು.

ಡಿ5ರಂದು ಟೌನ್ ಹಾಲ್ ನಿಂದ ಬೆಂಗಳೂರು ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಯಲಿದೆ. 250 ಕ್ಕೂ ಅಧಿ ಕನ್ನಡಪರ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಲಿವೆ.  ಹೆದ್ದಾರಿ ತಡೆ ಕೂಡ ನಡೆಯಲಿದ ಎಂದು ವಾಟಾಳ್ ಹೇಳಿದರು.

ಇತ್ತೀಚಿನ ಸುದ್ದಿ

Exit mobile version