ಗಮನಿಸಿ: ಡಿಸೆಂಬರ್ 8 ರಂದು ಕರ್ನಾಟಕ ಬಂದ್ - Mahanayaka
10:15 PM Wednesday 11 - September 2024

ಗಮನಿಸಿ: ಡಿಸೆಂಬರ್ 8 ರಂದು ಕರ್ನಾಟಕ ಬಂದ್

06/12/2020

ಬೆಂಗಳೂರು: ವಿವಾದಿತ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ, ವಿವಿಧ ರೈತ ಸಂಘಟನೆಗಳು ಭಾರತ ಬಂದ್ ಗೆ ಕರೆ ನೀಡಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ರೈತ ಸಂಘಟನೆಗಳೂ ಈ ಬಂದ್ ಗೆ ಬೆಂಬಲ ನೀಡಿ ಡಿಸೆಂಬರ್ 8ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ.

 ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್  ಈ ಬಗ್ಗೆ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ,  ಡಿಸೆಂಬರ್ 8ರಂದು ಭಾರತ ಬಂದ್ ಭಾಗವಾಗಿ ಕರ್ನಾಟಕ ಬಂದ್ ನಡೆಸಲಾಗುವುದು. ಎಲ್ಲಾ ಜಿಲ್ಲೆ, ತಾಲೂಕುಗಳಲ್ಲಿ ರೈತರು ಪ್ರತಿಭಟನೆಯಲ್ಲಿ ಭಾಗವಹಿಸುತ್ತಾರೆ ಎಂದು ಅವರು ಹೇಳಿದರು.


Provided by

 ದೆಹಲಿಯಲ್ಲಿ ರೈತರ ಪ್ರತಿಭಟನೆ ಸರಿಯಾಗಿ ಮಾಡಲು ಕೊಡಲಿಲ್ಲ. ಅವರ ಚಳವಳಿಯನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡಿದೆ. ಬೇಜವಾಬ್ದಾರಿಯಿಂದ ವರ್ತಿಸಿದೆ. ಆದ್ದರಿಂದ ಕರ್ನಾಟಕ ಬಂದ್​ ಮಾಡಲಾಗುವುದು  ಸಿಎಂ  ಯಡಿಯೂರಪ್ಪನವರು ನಮ್ಮ ಬಂದ್ ಹತ್ತಿಕ್ಕುವ ಕೆಲಸ ಮಾಡಬಾರದು ಎಂದ ಅವರು, ಈ ಬಂ ದ್‌ಗೆ ಎಲ್ಲ ಸಂಘಟನೆಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಕೇಂದ್ರ ಸರಕಾರ ರೈತರ ಹಾಗೂ ದೇಶ ವಿರೋಧಿ ಮತ್ತು ಕಾರ್ಪೋರೇಟ್ ಕಂಪನಿ ಪರವಾದ ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ- 2020 ಮತ್ತು ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆ – 2020 ಗಳನ್ನು ಬೇಷರತ್ತಾಗಿ ವಾಪಾಸು ಪಡೆಯುವಂತೆ ಒತ್ತಾಯಿಸಲಾಗುವುದು. ಅಂದು ಎಲ್ಲಾ ಹೆದ್ದಾರಿ, ರಸ್ತೆಗಳನ್ನು ಬಂದ್ ಮಾಡುತ್ತೇವೆ.

ಬಂದ್‌ಗೆ ಎಡಪಕ್ಷದವರು, ಪುಟ್ಟಣ್ಣಯ್ಯನವರ ರೈತ ಸಂಘಟನೆ, ಕುರುಬೂರು ಶಾಂತಕುಮಾರ್ ಸಂಘಟನೆಯವರು ಭಾಗವಹಿಸುತ್ತಾರೆ. ಅನೇಕ ಕನ್ನಡ ಪರ ಸಂಘಟನೆಗಳು, ಮಹಿಳಾ ಸಂಘಟನೆಗಳು ಭಾಗವಹಿಸಲಿವೆ  ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.




 

ಇತ್ತೀಚಿನ ಸುದ್ದಿ