ಕೃತಕ ಬಣ್ಣಯುಕ್ತ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿರ್ಬಂಧಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್ - Mahanayaka

ಕೃತಕ ಬಣ್ಣಯುಕ್ತ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ ನಿರ್ಬಂಧಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

gobi kotan candy
11/03/2024


Provided by

ಬೆಂಗಳೂರು: ಕರ್ನಾಟಕದಲ್ಲಿ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಸುವುದನ್ನು ಮತ್ತು ಕಾಟನ್ ಕ್ಯಾಂಡಿಯಲ್ಲಿ (ಬೊಂಬಾಯಿ ಮಿಠಾಯಿ) ‘ರೋಡಮೈನ್-ಬಿ’ ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಬಳಸುವುದನ್ನು ನಿರ್ಬಂಧಿಸಲು ನಿರ್ಧರಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೃತಕ ಬಣ್ಣದ ತಿಂಡಿ ತಿನಿಸುಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತಿದೆ. ಕಲರ್ ಕಾಟನ್ ಕ್ಯಾಂಡಿ ಮಾರಾಟ ಮತ್ತು ಸೇವನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಅಂತಹ ಉತ್ಪನ್ನಗಳಲ್ಲಿ ವಿಷಕಾರಿ ಅಂಶಗಳ ಇರುವುದನ್ನು ಎತ್ತಿ ತೋರಿಸುತ್ತದೆ. ಬಣ್ಣ ರಹಿತ ಹತ್ತಿ ಕ್ಯಾಂಡಿಗೆ ಅನುಮತಿ ನೀಡಲಾಗಿದ್ದು, ಗೋಬಿ ಮಂಚೂರಿಯನ್ನಂತಹ ತಿಂಡಿಗಳ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ- ತಿನಿಸುಗಳನ್ನು ದೀರ್ಘಕಾಲ ಬಳಸುವುದರಿಂದ ಕಾನ್ಸರ್ನಂಥ ಮಾರಕ ರೋಗಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ ಕೃತಕ ಬಣ್ಣ ಬಳಸಿ ತಯಾರಿಸುವ ತಿಂಡಿ ತಿನಿಸುಗಳನ್ನುಸಾರ್ವಜನಿಕರು ಸೇವಿಸಬಾರದು ಅಥವಾ ಮಿತವಾಗಿ ಸೇವಿಸಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೃತಕ ಬಣ್ಣಗಳು ಕಂಡುಬಂದ ಮಾದರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳು ಕಾಯ್ದೆ- 2006 ರ ನಿಯಮ 3(1)ರ ಅನ್ವಯ ಅಸುರಕ್ಷಿತ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ