5:37 PM Saturday 18 - October 2025

ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಸಂಬಂಧವಿಲ್ಲ: ಬಿಜೆಪಿ ಟಿಕೆಟ್ ಆಕಾಂಕ್ಷಿ ಆಣೆ ಪ್ರಮಾಣ!

deepak doddaiha
23/11/2022

ಚಿಕ್ಕಮಗಳೂರು: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ.ಕುಮಾರಸ್ವಾಮಿ, ತಮ್ಮ ಮೇಲಿನ ಹಲ್ಲೆಗೆ ದೀಪಕ್‌ ದೊಡ್ಡಯ್ಯ ಅವರ ಸಂಚು ಕಾರಣ ಎಂದು ಆರೋಪಿಸಿದ್ದರು. ಇದೀಗ ಈ ಸಂಬಂಧ ದೀಪಕ್ ದೊಡ್ಡಯ್ಯ ಆಣೆ ಪ್ರಮಾಣ ಮಾಡಿದ್ದಾರೆ.

ಅಮಾವಾಸ್ಯೆಯ ದಿನ ಈಶ್ವರನ ಎದುರು ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ದೀಪಕ್‌ ದೊಡ್ಡಯ್ಯ, ಆ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಮಾಣ ಮಾಡಿದ್ದಾರೆ.

ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಘಟನೆಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ, ಆದರೆ ಬಿಜೆಪಿ ನಾಯಕರೊಳಗಿನ ಗುದ್ದಾಟಕ್ಕೆ ಕಾರಣವಾಗಿದೆ. ಮೊದಲು ಆನೆಗಳಿಂದ ಗ್ರಾಮಸ್ಥರಿಗೆ ಮುಕ್ತಿ ದೊರೆಯಬೇಕು. ಆದರೆ, ಇಲ್ಲಿ ಕೇವಲ ರಾಜಕೀಯ ಮಾತ್ರ ನಡೆಯುತ್ತಿದೆ ಅನ್ನೋ ಮಾತುಗಳು ಇದೀಗ ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version