1:50 PM Sunday 14 - September 2025

ರಸ್ತೆಯ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ: ಶಾಸಕರ ವಿರುದ್ಧ ಆಕ್ರೋಶ

deepawali protest
27/10/2022

ಬೆಳ್ತಂಗಡಿ: ಗುಂಡಿ ಬಿದ್ದ ರಸ್ತೆಗಳನ್ನು ದುರಸ್ತಿ ಮಾಡದ ಸರ್ಕಾರ , ಜನಪ್ರತಿನಿಧಿಗಳ ಕಾರ್ಯವೈಖರಿಯನ್ನು ಖಂಡಿಸಿ ದೀಪಾವಳಿ ಬಲಿಪಾಡ್ಯದ ಸಂಭ್ರಮದ ನಡುವೆಯೂ ಸಮಾನಮನಸ್ಕರ ಯುವಕರ ತಂಡ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಆಚರಣೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆಯಿತು.

ಬುಧವಾರ ಸಂಜೆ ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ದೀಪಾವಳಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ, ಸಿಪಿಐ(ಎಂ) ನಾಯಕ ಶೇಖರ್ ಲಾಯಿಲ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು , ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್. ಅಳದಂಗಡಿ ಮಾತನಾಡಿ, ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸಿರುವ ಘಟನೆ  ಶಾಸಕ , ಸಂಸದರಿಗೆ ನಾಚಿಕೆ ವಿಚಾರ ಎಂದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ , ಜಿಲ್ಲಾ ಯುವ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯದರ್ಶಿ ಪ್ರಜ್ವಲ್ ಜೈನ್, ಯುವ ಇಂಟೆಕ್ ಅಧ್ಯಕ್ಷ ನವೀನ್ ಗೌಡ ಸವಣಾಲು , ಗಣೇಶ್ ಕಣಿಯೂರು , ಸಾಮಾಜಿಕ ಕಾರ್ಯಕರ್ತರಾದ ಅಲ್ತಪ್ , ಅಲ್ವಿನ್ , ನೌಷದ್ ಕೈಕಂಬ ಮತ್ತು ಇತರರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version