ಜಿಂಕೆ ಕೊಂಬು, ನಕ್ಷತ್ರ ಆಮೆ ಸಾಗಾಟ: ಇಬ್ಬರ ಬಂಧನ

chamarajanagara
01/05/2023

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಜಿಂಕೆಕೊಂಬು, ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಘಟನೆ ಕೊಳ್ಳೇಗಾಲ ತಾಲೂಕಿನ ನರೀಪುರ‌ ಹಾಗೂ ಸರಗೂರು ಗ್ರಾಮದಲ್ಲಿ ನಡೆದಿದೆ.

ನರೀಪುರ ಗ್ರಾಮದ ಬಸ್ ನಿಲ್ದಾಣದಲ್ಲಿ ಜಿಂಕೆ ಕೊಂಬು ಸಾಗಾಟ ಮಾಡುತ್ತಿದ್ದ ಮೈಸೂರು ಜಿಲ್ಲೆಯ ಕೂರ್ಗಳ್ಳಿ ಗ್ರಾಮದ ಮಂಜಾಚಾರಿ(42) ಎಂಬಾತನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ ಬಂಧಿತನಿಂದ ಜಿಂಕೆಕೊಂಬು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಸರಗೂರು ಗ್ರಾಮದ ಬಸ್ ನಿಲ್ದಾಣ ಸಮೀಪ ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಚಟ್ನಹಳ್ಳಿ ಗ್ರಾಮದ ಫೈರೋಜ್ ಖಾನ್(36) ಎಂಬಾತನನ್ನು ಬಂಧಿಸಿ ಆಮೆಯನ್ನು ರಕ್ಷಿಸಲಾಗಿದೆ.ಅರಣ್ಯ ಸಂಚಾರಿ ದಳದ ಪೊಲೀಸರು ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version