ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ: ರಾಜನಾಥ್ ಸಿಂಗ್ - Mahanayaka
1:29 AM Saturday 14 - December 2024

ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ: ರಾಜನಾಥ್ ಸಿಂಗ್

rajanath singh
18/11/2022

ಉಡುಪಿ: ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಹೇಳಿದರು.

ಮಣಿಪಾಲ ಮಾಹೆ ವಿವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಿ, ಐದು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಿದ ರಾಜನಾಥ್ ಸಿಂಗ್ ಬಳಿಕ ಮಾತನಾಡಿ,  ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ. ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು ಎಂದು ಅವರು ನುಡಿದರು.

ದೇಶದ ಯುವ ಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದ್ದೇವೆ. ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್ ಇ ಪಿ ಜಾರಿಗೆ ತಂದಿದ್ದೇವೆ. ಮಾಹೆ ವಿವಿಯ ಸತ್ಯ ನಾಡೆಳ್ಳಾ ಮೈಕೋಸಾಫ್ಟ್ ನ ನೇತೃತ್ವ ವಹಿಸಿದ್ದಾರೆ. ಮೈಕ್ರೋಸಾಫ್ಟ್ ಮೀರಿಸುವಂತಹ ಕಂಪನಿ ಭಾರತದಲ್ಲಿ ಸ್ಥಾಪನೆ ಆಗಬೇಕು. ಅಂತಾರಾಷ್ಟ್ರೀಯ ಕಂಪನಿ ಸಿಇಒಗಳು ಭಾರತ ಮೂಲದವರು ಎಂಬುದು ನಮ್ಮ ಹೆಗ್ಗಳಿಕೆ ಎಂದರು.

ವಿದ್ಯಾರ್ಥಿಗಳಲ್ಲಿ ಜ್ಞಾನದ ಜೊತೆ ಬುದ್ದಿವಂತಿಕೆಯೂ ಅಗತ್ಯ. ರಾಮನಿಗಿಂತ ರಾವಣ ಜ್ಞಾನಿಯಾಗಿದ್ದ. ಆದರೆ, ವಿವೇಕ ಇರುವುದರಿಂದ ಜನ ರಾಮನನ್ನು ಪೂಜಿಸುತ್ತಾರೆ. ಸಂಸ್ಕೃತಿ ಮತ್ತು ಸಂಪ್ರದಾಯ ಇಲ್ಲದ ನಾಗರಿಕ ಜೀವನಕ್ಕೆ ಅರ್ಥ ಇಲ್ಲ ಎಂದರು.

ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡಿದ್ದೇನೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹೆಚ್ಚುಗಾರಿಕೆ ಎಂದು ಟೀಕಿಸುತ್ತಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ ಎಂದರು.

ಭಾರತೀಯರು ಕೊಡುಗೆ ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೋರಸನ ಪ್ರಮೇಯವನ್ನು ಬೋದಾಯನ ಋಷಿ 300 ವರ್ಷಗಳ ಹಿಂದೆಯೇ ಹೇಳಿದ್ದ. ಭಾರತದ ಆರ್ಥಿಕ ಸದೃಢತೆ ಗುಣಮಟ್ಟದ ಮಾನವ ಸಂಪನ್ಮೂಲಗಳಲ್ಲಿ ಇದೆ ಎಂದು ಸಿಂಗ್ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ