6:06 PM Sunday 28 - September 2025

ಚೈತನ್ಯಾನಂದ ಸ್ವಾಮೀಜಿಯ ಕಾಮಲೀಲೆ ಬಯಲು: 16 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

chaitanyananda saraswati
25/09/2025

ನವದೆಹಲಿ: ಶ್ರೀ ಶಾರದಾ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯನ್‌ ಮ್ಯಾನೇಜ್ಮೆಂಟ್ ನಿರ್ದೇಶಕ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ(Chaitanyananda Saraswati )ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪ ದಾಖಲಾಗಿದೆ.

ಶ್ರೀ ಶಾರದಾ ಇನ್‌ ಸ್ಟಿಟ್ಯೂಟ್‌ ಆಫ್‌ ಇಂಡಿಯನ್‌ ಮ್ಯಾನೇಜ್ಮೆಂಟ್ ಕರ್ನಾಟಕದ ಶಾರದಾ ಮಠದ ಅಧೀನ ಸಂಸ್ಥೆಯಾಗಿದ್ದು, ಸದ್ಯ ಸ್ವಾಮೀಜಿಯನ್ನು ಆರೋಪ ಕೇಳಿಬಂದ ಕೂಡಲೇ ವಜಾಗೊಳಿಸಲಾಗಿದೆ.

ಶಾರದಾ ಇನ್‌ ಸ್ಟಿಟ್ಯೂಟ್‌ ನಲ್ಲಿ ವ್ಯಾಸಂಗ ಮಾಡುತ್ತಿರುವ 32 ವಿದ್ಯಾರ್ಥಿನಿಯರ ಪೈಕಿ ಸುಮಾರು 16 ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಸ್ವಾಮೀಜಿ ಮೇಲಿದೆ. ವಿದ್ಯಾರ್ಥಿನಿಯರನ್ನು ವ್ಯವಸ್ಥಿತವಾಗಿ ಬ್ಲಾಕ್ ಮೇಲ್ ಮಾಡಿದ್ದಾರೆ ಎನ್ನಲಾಗಿದೆ.  ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ತಮ್ಮ ಕೋಣೆಗೆ ಕರೆಸಿಕೊಳ್ಳುತ್ತಿದ್ದ ಸ್ವಾಮೀಜಿ, ನಾನು ಹೇಳಿದಂತೆ ಕೇಳಿಲ್ಲ ಅಂದರೆ ಕಡಿಮೆ ಅಂಕ ಕೊಡಿಸುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ವರದಿಯಾಗಿದೆ.

ಅಶ್ಲೀಲ ವಾಟ್ಸಾಪ್‌ ಸಂದೇಶ ಮತ್ತು ಸಮ್ಮತಿಯಿಲ್ಲದ ಲೈಂಗಿಕ ಸಂಪರ್ಕ ಹೊಂದುತ್ತಿದ್ದ ಆರೋಪವೂ ಸ್ವಾಮೀಜಿ ಮೇಲಿದೆ. ಕೆಲವರಿಗೆ ವಿದೇಶ ಪ್ರವಾಸದ ಭರಸೆ ನೀಡಿ ಲೈಂಗಿಕ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಇದರ ಜೊತೆಗೆ, ಶೃಂಗೇರಿ ಮಠದ ಆಡಳಿತಾಧಿಕಾರಿ ಸಹ ಸ್ವಾಮೀಜಿ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ. ಸದ್ಯ ಪಟಿಯಾಲ ಹೌಸ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲೂ ಸ್ವಾಮೀಜಿ ವಿರುದ್ಧ ದೂರು ದಾಖಲಾಗಿದೆ‌.

ವಿಚಾರ ತಿಳಿದ ತಕ್ಷಣ ಶೃಂಗೇರಿ ಮಠದ ಆಡಳಿತ ತಕ್ಷಣ ಸ್ವಾಮೀಜಿಯನ್ನು ವಜಾ ಮಾಡಿದೆ. ಕೇಸ್‌ ದಾಖಲಾಗುತ್ತಿದ್ದಂತೆಯೇ ಚೈತನ್ಯಾನಂದ ಸರಸ್ವತಿ ಸ್ವಾಮೀಜಿ ಪರಾರಿ ಆಗಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version