7 ದಿನಗಳ ಕಾಲ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಡಿ ಕಸ್ಟಡಿಗೆ

ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು 7 ದಿನಗಳ ಕಾಲ ಜಾರಿ ನಿರ್ದೇಶನಾಲಯ(ಇಡಿ) ವಶಕ್ಕೆ ನೀಡಲಾಗಿದೆ.
ತಮ್ಮ ಬಂಧನವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ನಡುವೆ ಅರ್ಜಿಯನ್ನು ವಾಪಸ್ ಪಡೆದಿದ್ದರು. ಇದಾದ ಬಳಿಕ ದೆಹಲಿಯ ರೂಸ್ ಅವೆನ್ಯೂ ಕೋರ್ಟ್, ಇ.ಡಿ ವಶಕ್ಕೆ ವಹಿಸಿ ಆದೇಶ ಹೊರಡಿಸಿದೆ.
ಕೇಜ್ರಿವಾಲ್ ಅವರನ್ನು 10 ದಿನಗಳ ಕಾಲ ವಶಕ್ಕೆ ನೀಡುವಂತೆ ಇಡಿ ಅಧಿಕಾರಿಗಳು ಕೋರ್ಟ್ ಗೆ ಕೋರಿತ್ತು. ತನಿಖೆ ಪೂರ್ಣಗೊಳಿಸಲು ಸಾಕಷ್ಟು ಸಮಯಾವಕಾಶಗಳು ಬೇಕು ಎಂದು ಇಡಿ ಕೇಳಿತ್ತು.
ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಕರಣದ ಕಿಂಗ್‌ಪಿನ್ ಎಂದು ಇ.ಡಿ ಕರೆದಿದೆ. ಆಪಾದಿತ ಹಗರಣದ ಒಟ್ಟು ಆದಾಯವು 600 ಕೋಟಿ ಮೀರಿದೆ. ಇದರಲ್ಲಿ ‘ಸೌತ್ ಗ್ರೂಪ್’ ಪಾವತಿಸಿದ 100 ಕೋಟಿಯೂ ಸೇರಿದೆ ಎಂದು ಇ.ಡಿ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth