ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿ ವಿಶೇಷ ಬಡ್ತಿ ಪಡೆದ ಮಹಿಳಾ ಪೊಲೀಸ್
ನವದೆಹಲಿ: ಕಾಣೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿದ ಮಹಿಳಾ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅವರಿಗೆ ವಿಶೇಷ ಬಡ್ತಿ ನೀಡಲಾಗಿದ್ದು, ಔಟ್ ಆಫ್ ಟರ್ನ್ ಪ್ರಮೋಷನ್ ಅಡಿಯಲ್ಲಿ ವಿಶೇಷ ಬಡ್ತಿ ಪಡೆದ ದೆಹಲಿಯ ಮೊದಲ ಪೊಲೀಸ್ ಎಂಬ ಖ್ಯಾತಿಗೆ ಮಹಿಳಾ ಹೆಡ್ ಕಾನ್ಸ್ ಟೇಬಲ್ ಒಬ್ಬರು ಪಾತ್ರರಾಗಿದ್ದಾರೆ.
ಸಮಯ್ ಪುರ ಬಾಡ್ಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಸೀಮಾ ಢಾಕಾ ಎರಡೂವರೆ ತಿಂಗಳಲ್ಲಿ ನಾಪತ್ತೆಯಾದ 76 ಮಕ್ಕಳನ್ನು ಪತ್ತೆ ಹಚ್ಚಿ ವಿಶೇಷ ಬಡ್ತಿಯನ್ನು ಪಡೆದುಕೊಂಡಿದ್ದಾರೆ. ಕಾಣೆಯಾದ ಮಕ್ಕಳನ್ನು ದೆಹಲಿಯಲ್ಲಿ ಮಾತ್ರವಲ್ಲದೇ ಪಂಜಾಬ್, ಪಶ್ಚಿಮ ಬಂಗಾಳ ಮತ್ತಿತರ ರಾಜ್ಯಗಳಲ್ಲೂ ಪತ್ತೆ ಹಚ್ಚಿದ್ದಾರೆ.
2006 ಜುಲೈ 3 ರಂದು ದೆಹಲಿ ಪೊಲೀಸ್ ಸೇವೆಗೆ ಸೇರಿದ ಢಾಕಾ, 2012ರವರೆಗೂ ಅಗ್ನೇಯ ದೆಹಲಿಯಲ್ಲಿಯೇ ಸೇವೆಗೆ ನಿಯೋಜನೆಗೊಂಡಿದ್ದರು. 2014ರಲ್ಲಿ ಬಡ್ತಿ ಪಡೆದು ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.