ಅಬಕಾರಿ ನೀತಿ ಹಗರಣ: ಬಿಆರ್‌ಎಸ್ ನಾಯಕಿ ಕೆ.ಕವಿತಾ ರ ಇ.ಡಿ ಕಸ್ಟಡಿ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್‌ಎಸ್ ನಾಯಕಿ ಕೆ.ಕವಿತಾ ರ ಇ.ಡಿ. ಕಸ್ಟಡಿ ಅವಧಿಯನ್ನು ಮಾ. 26 ವಿಸ್ತರಿಸಿ ದೆಹಲಿ ನ್ಯಾಯಾಲಯ ಶನಿವಾರ ಆದೇಶಿಸಿದೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು ಕವಿತಾ ಪ್ರತಿಕ್ರಿಯಸಿದ್ದಾರೆ.
ಬಿಆರ್‌ಎಸ್ ನಾಯಕಿ ಕೆ.ಕವಿತಾರನ್ನು ಇ.ಡಿ ಅಧಿಕಾರಿಗಳು ಮಾ.15 ರಂದು ಬಂಧಿಸಿತ್ತು. ಬಳಿಕ ಮಾ. 23ರವರೆಗೆ ಇ.ಡಿ ಕಸ್ಟಡಿಗೆ ಒಪ್ಪಿಸಲಾಗಿತ್ತು. ಇದೀಗ ಈ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಇ.ಡಿ ಅಧಿಕಾರಿಗಳು ಕವಿತಾರನ್ನು ಶನಿವಾರ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. ಈ ಸಂದರ್ಭ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾವು ಹೋರಾಟ ನಡೆಸುತ್ತೇವೆ. ಚುನಾವಣೆಯ ವೇಳೆ ವಿರೋಧ ಪಕ್ಷಗಳ ನಾಯಕರನ್ನು ಬಂಧಿಸುವುದು ತಪ್ಪು. ಚುನಾವಣಾ ಆಯೋಗವು ಮಧ್ಯಪ್ರವೇಶಿಸಿ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕು. ಜೈ ತೆಲಂಗಾಣ’ ಎಂದು ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth