ಉದ್ಯೋಗಕ್ಕಾಗಿ ಭೂಮಿ ಹಗರಣ: ಲಾಲು ಯಾದವ್, ರಾಬ್ರಿ ದೇವಿ, ತೇಜಸ್ವಿ ಯಾದವ್ ಗೆ ಜಾಮೀನು ಮಂಜೂರು

ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್ ಮತ್ತು ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್ ಜೆಡಿ ಸಂಸದೆ ಮಿಸಾ ಭಾರತಿ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ.
ವಿಶೇಷ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳ ವಿರುದ್ಧ ಹೊರಡಿಸಲಾದ ಸಮನ್ಸ್ ಗೆ ಅನುಸಾರವಾಗಿ ನ್ಯಾಯಾಲಯಕ್ಕೆ ಹಾಜರಾದ ನಂತರ ಅವರಿಗೆ ಪರಿಹಾರ ನೀಡಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಆರ್ ಜೆಡಿ ಮುಖ್ಯಸ್ಥ ಲಾಲು ಯಾದವ್, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಆರ್ಜೆಡಿ ಸಂಸದೆ ಮಿಸಾ ಭಾರತಿ ತಲಾ 50,000 ರೂ.ಗಳ ವೈಯಕ್ತಿಕ ಜಾಮೀನು ಬಾಂಡ್ ಸಲ್ಲಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಪ್ರಕರಣದ ಎಲ್ಲ ಆರೋಪಿಗಳಿಗೆ ದೋಷಾರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆ ನ್ಯಾಯಾಲಯ ಸಿಬಿಐಗೆ ನಿರ್ದೇಶನ ನೀಡಿದೆ. ಮುಂದಿನ ವಿಚಾರಣೆ ಅಕ್ಟೋಬರ್ 16 ರಂದು ನಡೆಯಲಿದೆ. ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ದೇವಿ, ಪುತ್ರ ತೇಜಸ್ವಿ ಯಾದವ್ ಮತ್ತು ಆರ್ಜೆಡಿ ಸಂಸದೆ ಮಿಸಾ ಭಾರತಿ ಅವರು ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದ ಕೂಡಲೇ ರೂಸ್ ಅವೆನ್ಯೂ ನ್ಯಾಯಾಲಯದಿಂದ ಹೊರನಡೆದರು.
ಭ್ರಷ್ಟಾಚಾರ, ಕ್ರಿಮಿನಲ್ ಪಿತೂರಿ, ವಂಚನೆ ಮತ್ತು ಫೋರ್ಜರಿ ಸೇರಿದಂತೆ ವಿವಿಧ ಅಪರಾಧಗಳನ್ನು ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ನ್ಯಾಯಾಲಯವು ಸೆಪ್ಟೆಂಬರ್ 22 ರಂದು ಆರೋಪಿಗಳಿಗೆ ಸಮನ್ಸ್ ನೀಡಿತ್ತು.