ಮಾರ್ಚ್ 16ರಂದು ಹಾಜರಾಗಿ: ಅರವಿಂದ್ ಕೇಜ್ರಿವಾಲ್ ಗೆ ದೆಹಲಿ ಕೋರ್ಟ್ ಸಮನ್ಸ್ ಜಾರಿ

ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ತಮಗೆ ನೀಡಲಾದ ಅನೇಕ ಸಮನ್ಸ್ ಗಳನ್ನು ತಪ್ಪಿಸಿಕೊಂಡಿದ್ದಕ್ಕಾಗಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಹೊಸ ದೂರು ದಾಖಲಿಸಿದ ನಂತರ ದೆಹಲಿ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 16ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ನ್ಯಾಯಾಲಯ ಸೂಚಿಸಿದೆ.
ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಹಲವು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಾರಿ ನಿರ್ದೇಶನಾಲಯ(ಇಡಿ) ದೆಹಲಿ ನ್ಯಾಯಾಲಯಕ್ಕೆ ಹೊಸ ದೂರು ಸಲ್ಲಿಸಿತ್ತು.
ಈ ಹೊಸ ದೂರಿನಲ್ಲಿ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕರಾಗಿರುವ ಅರವಿಂದ್ ಕೇಜ್ರಿವಾಲ್ ಅವರು 4 ರಿಂದ 8 ರವರೆಗಿನ ಸಮನ್ಸ್‌ಗಳನ್ನು ಗೌರವಿಸಿಲ್ಲ ಎಂದು ಇಡಿ ಆರೋಪಿಸಿತ್ತು.
ಎಸಿಎಂಎಂ ದಿವ್ಯಾ ಮಲ್ಹೋತ್ರಾ ಅವರ ನ್ಯಾಯಾಲಯ, ಗುರುವಾರ ಈ ಹೊಸ ದೂರಿನ ವಿಚಾರಣೆ ನಡೆಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth