ಗುಂಡಿನ ದಾಳಿ: ಜಿಮ್ ಮಾಲೀಕನ ಬರ್ಬರ ಹತ್ಯೆ - Mahanayaka
11:38 PM Tuesday 21 - October 2025

ಗುಂಡಿನ ದಾಳಿ: ಜಿಮ್ ಮಾಲೀಕನ ಬರ್ಬರ ಹತ್ಯೆ

13/09/2024

ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿ ಗುರುವಾರ ರಾತ್ರಿ ಜಿಮ್ ಮಾಲೀಕರನ್ನು ಕೆಲವು ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಮೃತರನ್ನು ನಾದಿರ್ ಶಾ ಎಂದು ಗುರುತಿಸಲಾಗಿದೆ. ಕೂಡಲೇ ಗಾಯಾಳುವನ್ನು ಸ್ನೇಹಿತರು ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಆದಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ಘೋಷಿಸಿದರು ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದರು.

“ತಕ್ಷಣವೇ ಅವರನ್ನು ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದರು.ಆದರೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಈ ಕುರಿತು ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

“ರಾತ್ರಿ 10:45 ರ ಸುಮಾರಿಗೆ ಗುಂಡಿನ ದಾಳಿಯ ಬಗ್ಗೆ ನಮಗೆ ಪಿಸಿಆರ್ ಕರೆ ಬಂತು. ಜಿಕೆ (ಗ್ರೇಟರ್ ಕೈಲಾಶ್) ನ ಇ-ಬ್ಲಾಕ್‌ನಲ್ಲಿ ಗುಂಡಿನ ದಾಳಿ ಘಟನೆಯ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಆತನನ್ನು ನಾದಿರ್ ಶಾ ಎಂದು ಗುರುತಿಸಲಾಗಿದ್ದು, ಸಹಭಾಗಿತ್ವದಲ್ಲಿ ಜಿಮ್ ನಡೆಸುತ್ತಿದ್ದಾನೆ. ಸುಮಾರು 7-8 ಸುತ್ತು ಗುಂಡು ಹಾರಿಸಲಾಗಿದೆ ಎಂದು ಡಿಸಿಪಿ (ದಕ್ಷಿಣ) ಅಂಕಿತ್ ಚೌಹಾಣ್ ಎಎನ್ಐಗೆ ತಿಳಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ