ಸಿಎಂ ಸ್ಥಾನದಿಂದ ಕೇಜ್ರಿವಾಲ್ ರನ್ನು ವಜಾ ಮಾಡಿ ಎಂದು ಸಲ್ಲಿಸಿದ್ದ ಅರ್ಜಿ ವಜಾ

05/04/2024

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್​ ತಿರಸ್ಕಾರ ಮಾಡಿದೆ.

ಹಂಗಾಮಿ ಮುಖ್ಯ ನ್ಯಾ. ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ತಿಳಿಸಿದೆ.
ಇಡಿ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ ಬಳಿಕ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗಿತ್ತು. ಇದೀಗ ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಕೇಜ್ರಿವಾಲ್ ಅವರಿಗೆ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ತಿಳಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version