ಪ್ರಚೋದನಕಾರಿ ಭಾಷಣ ಆರೋಪ: ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್‌ ಇಮಾಮ್‌ಗೆ ಜಾಮೀನು - Mahanayaka

ಪ್ರಚೋದನಕಾರಿ ಭಾಷಣ ಆರೋಪ: ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್‌ ಇಮಾಮ್‌ಗೆ ಜಾಮೀನು

29/05/2024

ವಿದ್ಯಾರ್ಥಿ ಹೋರಾಟಗಾರ ಶರ್ಜೀಲ್‌ ಇಮಾಮ್‌ಗೆ ದಿಲ್ಲಿ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರುಗೊಳಿಸಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಆಲಿಘರ್‌ ಮುಸ್ಲಿಂ ವಿವಿ ಮತ್ತು ದಿಲ್ಲಿಯ ಜಾಮಿಯಾ ಮಿಲಿಯಾ ವಿವಿಯಲ್ಲಿ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪಗಳು ಅವರ ಮೇಲಿವೆ.

ವಿಚಾರಣಾ ನ್ಯಾಯಾಲಯವು ಜಾಮೀನು ನಿರಾಕರಿಸಿ ಹೊರಡಿಸಿದ್ದ ಆದೇಶವನ್ನು ಈ ಹಿಂದೆ ಶರ್ಜೀಲ್‌ ಇಮಾಮ್‌ ಪ್ರಶ್ನಿಸಿ ದಿಲ್ಲಿ ಹೈಕೋರ್ಟ್‌ ಕದ ತಟ್ಟಿದ್ದರು. ಇಂದು ನ್ಯಾಯಮೂರ್ತಿಗಳಾದ ಸುರೇಶ್‌ ಕುಮಾರ್ ಕೈಟ್‌ ಮತ್ತು ಮನೋಜ್‌ ಜೈನ್‌ ಅವರ ವಿಭಾಗೀಯ ಪೀಠ ಶರ್ಜೀಲ್‌ ಇಮಾಮ್‌ಗೆ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ ಗರಿಷ್ಠ ಏಳು ವರ್ಷ ಜೈಲು ಶಿಕ್ಷೆಯಲ್ಲಿ ಈಗಾಗಲೇ ಅರ್ಧದಷ್ಟು ಶಿಕ್ಷೆ ಅವಧಿ ಪೂರ್ಣಗೊಂಡಿರುವುದರಿಂದ ಜಾಮೀನು ಮಂಜೂರುಗೊಳಿಸುವಂತೆ ಶರ್ಜೀಲ್‌ ಕೋರಿದ್ದರು.
ಶರ್ಜೀಲ್‌ ನೀಡಿದ ಭಾಷಣಗಳು ಶಾಂತಿಭಂಗ ಉಂಟುಮಾಡಿರಬಹುದು ಹಾಗೂ 2020ರ ದಿಲ್ಲಿ ಹಿಂಸಾಚಾರಕ್ಕೆ ಕಾರಣವಾಗಿರಬಹುದು ಎಂಬ ಕಾರಣ ನೀಡಿ ಫೆಬ್ರವರಿ 17ರಂದು ವಿಚಾರಣಾ ನ್ಯಾಯಾಲಯ ಅವರಿಗೆ ಜಾಮೀನು ನಿರಾಕರಿಸಿತ್ತು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ