1:57 AM Wednesday 22 - October 2025

ಸುಶಾಂತ್ ಸಿಂಗ್ ರಜಪೂತ್ ಜೀವನಾಧಾರಿತ ಸಿನಿಮಾಕ್ಕೆ ತಡೆ ನೀಡಲು ದಿಲ್ಲಿ ಹೈಕೋರ್ಟ್ ನಕಾರ

12/07/2023

ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಜೀವನ ಆಧಾರಿತ ಸಿನಿಮಾದ ಆನ್‌ ಲೈನ್ ಸ್ಟ್ರೀಮಿಂಗ್ ಅನ್ನು ತಡೆಯಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.

ಆನ್‌ ಲೈನ್ ಪ್ಲಾಟ್‌ ಫಾರ್ಮ್‌ನಲ್ಲಿ ಸ್ಟ್ರೀಮ್ ಆಗುತ್ತಿರುವ ‘ನ್ಯಾಯ್: ದಿ ಜಸ್ಟೀಸ್’ ಚಲನಚಿತ್ರದಲ್ಲಿ ಮಾನಹಾನಿಕರ ಹೇಳಿಕೆಗಳು ಮತ್ತು ಸುದ್ದಿ ಲೇಖನಗಳು ಇದೆ ಎಂದು ಆರೋಪಿಸಿ ಮೃತ ಚಿತ್ರನಟನ ತಂದೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಿ ಹರಿಶಂಕರ್ ಅವರು ನಿನ್ನೆ ವಜಾಗೊಳಿಸಿದ್ದಾರೆ.

ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ತನ್ನ ಒಪ್ಪಿಗೆ ಇಲ್ಲದೇ ಚಲನಚಿತ್ರವನ್ನು ನಿರ್ಮಿಸಿದ್ದಕ್ಕಾಗಿ ಚಲನಚಿತ್ರ ನಿರ್ಮಾಪಕರ ವಿರುದ್ಧ ಮೊಕದ್ದಮೆಯನ್ನು ಹೂಡಿದ್ದಾರೆ.

ಚಲನಚಿತ್ರ ನಿರ್ಮಾಪಕರು ವಾಣಿಜ್ಯ ಲಾಭಕ್ಕಾಗಿ ಪರಿಸ್ಥಿತಿಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ. ತಮ್ಮ ಮಗನ ಹೆಸರು ಅಥವಾ ಆತನ ಜೀವನದ ಹೋಲಿಕೆಯನ್ನು ಚಲನಚಿತ್ರಗಳಲ್ಲಿ ಬಳಸದಂತೆ ನಿರ್ಮಾಪಕರನ್ನು ತಡೆಯುವಂತೆ ಅವರ ತಂದೆ ಕೋರಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಸಿ.ಹರಿ ಶಂಕರ್ ಅವರು ಈ ಅರ್ಜಿಯನ್ನು ವಜಾಗೊಳಿಸಿದ್ದು, ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾದ ವಿಚಾರವು ಅವರ ಖಾಸಗಿತನದ ಹಕ್ಕಾಗಿ ಉಳಿದಿಲ್ಲ ಎಂದು ಹೇಳಿದ್ದಾರೆ.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version