ದೆಹಲಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ಶಿಶುಗಳ ಸಾವು; 11 ಮಂದಿಯ ರಕ್ಷಣೆ - Mahanayaka

ದೆಹಲಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ಶಿಶುಗಳ ಸಾವು; 11 ಮಂದಿಯ ರಕ್ಷಣೆ

26/05/2024


Provided by

ರಾಜ್ ಕೋಟ್ ಗೇಮಿಂಗ್ ವಲಯದಲ್ಲಿ ಸಂಭವಿಸಿದ ದುರಂತದ ಒಂದು ದಿನದ ನಂತರ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ಆರು ಶಿಶುಗಳು ಸಾವನ್ನಪ್ಪಿವೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆ – ನವಜಾತ ಶಿಶು ಆರೈಕೆ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಒಟ್ಟು 11 ಶಿಶುಗಳನ್ನು ರಕ್ಷಿಸಲಾಗಿದೆ. ದೆಹಲಿ ಅಗ್ನಿಶಾಮಕ ಸೇವೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ಈ ಕುರಿತು ಅಗ್ನಿಶಾಮಕ ಅಧಿಕಾರಿ ರಾಜೇಂದ್ರ ಅಟ್ವಾಲ್ ಮಾತನಾಡಿ, “ರಾತ್ರಿ 11:32 ಕ್ಕೆ ಅಗ್ನಿಶಾಮಕ ಇಲಾಖೆಗೆ ಈ ಕುರಿತು ಕರೆ ಬಂದಿತ್ತು. ಒಟ್ಟು 16 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. 2 ಕಟ್ಟಡಗಳು ಬೆಂಕಿಯಿಂದ ಬಾಧಿತವಾಗಿವೆ, ಒಂದು ಆಸ್ಪತ್ರೆ ಕಟ್ಟಡ ಮತ್ತು ಬಲಭಾಗದಲ್ಲಿರುವ ವಸತಿ ಕಟ್ಟಡದ 2 ಮಹಡಿಗಳು ಸಹ ಬೆಂಕಿಗೆ ಆಹುತಿಯಾಗಿವೆ. 11-12 ಜನರನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದಿದ್ದಾರೆ.

ರಕ್ಷಿಸಿದ ನವಜಾತ ಶಿಶುಗಳನ್ನು ಪೂರ್ವ ದೆಹಲಿ ಅಡ್ವಾನ್ಸ್ ಎನ್ಐಸಿಯು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಅವರಿಗೆ ಅಗತ್ಯ ಆರೋಗ್ಯ ನೆರವು ನೀಡಲಾಗುತ್ತಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ