ಕಂಗನಾ ರಾವತ್ ವಿರುದ್ಧ ಕಾಂಗ್ರೆಸ್ ನಾಯಕಿಯ ಪೋಸ್ಟ್: ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶ

ನಟಿ ಕಂಗನಾ ರಾವತ್ ವಿರುದ್ಧ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರಿನಾಟೆ ಅವರ ಸಾಮಾಜಿಕ ಮಾಧ್ಯಮದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್ ಬಗ್ಗೆ ತನಿಖೆ ನಡೆಸುವಂತೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದಾರೆ.
ಬಿಜೆಪಿ ನಾಯಕಿ ಮತ್ತು ದೆಹಲಿಯ ಲೋಕಸಭಾ ಅಭ್ಯರ್ಥಿ ಬಾನ್ಸುರಿ ಸ್ವರಾಜ್ ಅವರು ಲೆಫ್ಟಿನೆಂಟ್ ಗವರ್ನರ್ ಗೆ ದೂರು ನೀಡಿದ ನಂತರ ತನಿಖೆ ನಡೆಸಿ ಶ್ರಿನಾಟೆ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು.
ಹಿಮಾಚಲ ಪ್ರದೇಶದ ಮಂಡಿಯಿಂದ ಲೋಕಸಭಾ ಅಭ್ಯರ್ಥಿಯಾಗಿ ಆಡಳಿತಾರೂಢ ಬಿಜೆಪಿ ಕಣಕ್ಕಿಳಿಸಿರುವ ಬಾಲಿವುಡ್ ನಟಿ ಕಂಗನಾ ರಾವತ್ ವಿರುದ್ಧ ಸುಪ್ರಿಯಾ ಶ್ರಿನಾಟೆ ಅವರ ಖಾತೆಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಕಾಮೆಂಟ್ ಪೋಸ್ಟ್ ಮಾಡಲಾಗಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth