6:01 AM Wednesday 27 - August 2025

ದೆಹಲಿಯಲ್ಲಿ ಮಳೆ ಅಬ್ಬರ: ಇಂದು ಕೂಡಾ ಹೆಚ್ಚಿನ ಮಳೆ ನಿರೀಕ್ಷೆ

02/03/2024

ದೆಹಲಿ ಮತ್ತು ಅದರ ಪಕ್ಕದ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್ಸಿಆರ್) ಶನಿವಾರ ಬೆಳಿಗ್ಗೆ ಲಘು ಮಳೆಯಾಗಿದ್ದು, ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ಗೆ ಇಳಿದಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರದಿಂದ ಮಧ್ಯಮ ಮಳೆ / ಗುಡುಗು ಸಹಿತ ಗಾಳಿ ಬೀಸಲಿದೆ (ಗಂಟೆಗೆ 40-50 ಕಿ.ಮೀ ವೇಗ)” ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ನಾಲ್ಕು ದಿನಗಳ ಕಾಲ ಗರಿಷ್ಠ ಉಷ್ಣಾಂಶ 27.4 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 13.4 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಕೆಲವು ಭಾಗಗಳಲ್ಲಿ ಮಾರ್ಚ್ 1-3 ರಿಂದ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಈ ಹಿಂದೆ ತಿಳಿಸಿತ್ತು.
ಜಮ್ಮು-ಕಾಶ್ಮೀರ-ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ಸೇರಿದಂತೆ ಪ್ರದೇಶಗಳು ಮಾರ್ಚ್ 3 ರವರೆಗೆ ಮಳೆ ಮತ್ತು ಹಿಮಪಾತವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version