8:05 AM Saturday 25 - October 2025

ಸುದೀರ್ಘ ಚರ್ಚೆ, ವಿರೋಧದ ಮಧ್ಯೆ ದೆಹಲಿ ಸುಗ್ರೀವಾಜ್ಞೆ ಮಸೂದೆ ಪಾಸ್..! ತೊಡೆ ತಟ್ಟಿದ INDIA ವಿರುದ್ಧ ಶಾ ವಾಗ್ದಾಳಿ

03/08/2023

ದೆಹಲಿ ಸುಗ್ರೀವಾಜ್ಞೆ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಮಸೂದೆಯನ್ನು ಮಂಡಿಸುವ ವೇಳೆ ವಿರೋಧ ಪಕ್ಷಗಳು ಸಭಾತ್ಯಾಗ ಮಾಡಿತು.

ಇದೇ ವೇಳೆ ಮಸೂದೆಯನ್ನು ತರಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ತೊಡೆ ತಟ್ಟಿದ್ದ ವಿರೋಧ ಪಕ್ಷದ ಮೈತ್ರಿ ‘ಇಂಡಿಯಾ’ ವಿರುದ್ಧ ವಾಗ್ದಾಳಿ ನಡೆಸಿದ ಗೃಹ ಸಚಿವ ಅಮಿತ್‌ ಶಾ, ಮಸೂದೆ ಅಂಗೀಕಾರವಾದರೆ ಪ್ರತಿಪಕ್ಷಗಳ ಮೈತ್ರಿ ಕುಸಿಯಲಿದೆ ಎಂದು ಹೇಳಿದ್ದಾರೆ.

ಕೇಂದ್ರಾಡಳಿತ ಪ್ರದೇಶಗಳು ಮತ್ತು ದೆಹಲಿಯಲ್ಲಿ ಕಾನೂನು ರೂಪಿಸುವ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇದೆ. ಕೇಂದ್ರಾಡಳಿತ ಪ್ರದೇಶವಾಗಿರುವುದರಿಂದ ನಿಯಮಗಳನ್ನು ರೂಪಿಸುವ ಸಂಪೂರ್ಣ ಹಕ್ಕು ಕೇಂದ್ರಕ್ಕೆ ಇದೆ. ದೆಹಲಿಗೆ ಕಾನೂನು ಮಾಡಲು ಕೇಂದ್ರಕ್ಕೆ ಅವಕಾಶ ನೀಡುವ ನಿಬಂಧನೆಗಳು ಸಂವಿಧಾನದಲ್ಲಿ ಇವೆ ಎಂದು ಅವರು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ತನ್ನ ಬಂಗಲೆ ಕಟ್ಟುವಂಥ ಭ್ರಷ್ಟಾಚಾರವನ್ನು ಮರೆಮಾಚಲು ವಿಜಿಲೆನ್ಸ್ ಇಲಾಖೆಯ ಮೇಲೆ ಹಿಡಿತ ಸಾಧಿಸುವುದೇ ಅದರ ಉದ್ದೇಶ ಇದೆ ಹೊರತು, ವರ್ಗಾವಣೆ ಮಾಡುವ ಹಕ್ಕು ಪಡೆಯುವುದಲ್ಲ ಎಂದು ಆರೋಪಿಸಿದ್ದಾರೆ.

ಮೇ 25 ರಂದು ಕೇಂದ್ರ ಸಚಿವ ಸಂಪುಟವು ‘ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರ್ಕಾರ (ತಿದ್ದುಪಡಿ) ಮಸೂದೆ’ಗೆ ಅನುಮೋದನೆ ನೀಡಿತ್ತು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸುಗ್ರೀವಾಜ್ಞೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಕೂಡಾ ಈ ಸುಗ್ರೀವಾಜ್ಞೆಗೆ ವಿರೋಧ ವ್ಯಕ್ತಪಡಿಸಿದ್ದವು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version