ದೆಹಲಿಗೆ ಶಾಕ್ ! ಭಾರೀ ಮಳೆ ಮಧ್ಯೆ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ವಿದ್ಯುತ್ ಸ್ಪರ್ಶದಿಂದ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.
ಈ ಘಟನೆಯು ದಿಲ್ಲಿ ರೈಲ್ವೇ ನಿಲ್ದಾಣದಲ್ಲಿರುವ ನಿರ್ಲಕ್ಷ್ಯ ಮತ್ತು ಸುರಕ್ಷತಾ ವೈಫಲ್ಯದ ಕುರಿತು ಪ್ರಶ್ನೆ ಮೂಡಿಸಿದೆ.
ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಎಂಬುವವರು ಇಂದು ಇಬ್ಬರು ಪರಿಚಿತ ಮಹಿಳೆಯರು ಮತ್ತು ಮೂವರು ಮಕ್ಕಳೊಂದಿಗೆ ನವದೆಹಲಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು.
ಮಳೆ ಜೋರಾಗೊ ಬರುತ್ತಿತ್ತು. ಸಾಕ್ಷಿಯವರು ಸ್ಟೇಷನ್ ನಲ್ಲಿದ್ದ
ವಿದ್ಯುತ್ ಕಂಬಕ್ಕೆ ಅಂಟಿಕೊಂಡು ಇರುವ ಕೊಚ್ಚೆಗುಂಡಿಗಳನ್ನು ತಪ್ಪಿಸಲು ಪ್ರಯತ್ನಿಸಿದರು. ದುರದೃಷ್ಟವಶಾತ್ ವಿದ್ಯುತ್ ಆಘಾತದಿಂದ ಈ ದುರ್ಘಟನೆ ಸಂಭವಿಸಿದೆ.
ಕೂಡಲೇ ಅಲ್ಲಿದ್ದವರು ಸಾಕ್ಷಿಯವರನ್ನು ತಕ್ಷಣ ಕಾರ್ಯಪ್ರವೃತ್ತರಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲಿ ಸಾಕ್ಷಿ ಅಹುಜಾ ಮೃತಪಟ್ಟಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw