ದೆಹಲಿ: ಕೋರ್ಟ್ ಆವರಣದಲ್ಲೇ ಮಹಿಳೆಯ ಮೇಲೆ ಗುಂಡಿನ ದಾಳಿ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯ ಮೇಲೆ ಗುಂಡಿನ ದಾಳಿ ನಡೆದಿದ್ದು, ಗುಂಡಿನ ದಾಳಿಯಿಂದ ಗಾಯಗೊಂಡ ಮಹಿಳೆಯನ್ನು ಪೋಲಿಸರು ಕೂಡಲೇ ಏಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಹಿಳೆಯು ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಆಗಮಿಸಿದ್ದರು. ಈ ಮಹಿಳೆಯನ್ನು ಗುರಿಯಾಗಿರಿಸಿ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆ ತನ್ನ ವಕೀಲರೊಂದಿಗೆ ಪ್ರಕರಣದ ಕುರಿತು ಚರ್ಚಿಸುತ್ತಿದ್ದಾಗ ಆರೋಪಿಯು ಗುಂಡು ಹಾರಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw