ಇ–ಸ್ವತ್ತು ಮಾಡಿಕೊಡಲು ಲಕ್ಷ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ
ಚಾಮರಾಜನಗರ: ಇ-ಸ್ವತ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆರ್ ಐ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ನಗರಸಭೆಯಲ್ಲಿ ನಡೆದಿದೆ.
ಚಾಮರಾಜನಗರ ನಗರಸಭೆಯ ಕಂದಾಯ ನೀರಿಕ್ಷಿಕ ನಾರಾಯಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಮಾದೇಶ್ ಎಂಬವರ ನಿವೇಶನದ ಇ-ಸ್ವತ್ತು ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇಂದು 20 ಸಾವಿರ ರೂ. ಹಣ ಪಡೆಯುವಾಗ ಲೋಕಾ ಪೊಲೀಸರು ರೆಡ್ ಹ್ಯಾಂಡಾಗಿ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ, ಲೋಕಾಯುಕ್ತ ಪೊಲೀಸರು ನಾರಾಯಣ್ ನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

























