ಮಂಗಳೂರು ಗೋಲಿಬಾರ್‌ ನಲ್ಲಿ ಮೃತಪಟ್ಟ ನೌಶೀನ್,  ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ - Mahanayaka
10:16 PM Thursday 18 - December 2025

ಮಂಗಳೂರು ಗೋಲಿಬಾರ್‌ ನಲ್ಲಿ ಮೃತಪಟ್ಟ ನೌಶೀನ್,  ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ

dinesh gundu rao
25/06/2023

ಮಂಗಳೂರಲ್ಲಿ ಕೋಮು ದ್ವೇಷಕ್ಕೆ ಬಲಿಯಾದ ಬಶೀರ್, ಪೊಲೀಸ್ ಗೋಲಿಬಾರ್‌ ನಲ್ಲಿ ಮೃತಪಟ್ಟ ಅಮಾಯಕರಾದ ನೌಶೀನ್ ಮತ್ತು ಜಲೀಲ್ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕೆ.ಅಶ್ರಫ್ ನೇತೃತ್ವದ ಮುಸ್ಲಿಮ್ ಒಕ್ಕೂಟ ನಿಯೋಗ, ಮೃತರ ಕುಟುಂಬ ಸದಸ್ಯರೊಂದಿಗೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ರನ್ನು ಮಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದೆ.

ಸಂತ್ರಸ್ತ ಕುಟುಂಬವು ಪರಿಹಾರ ಪಡೆಯಲು ಅರ್ಹವಾಗಿದೆ ಎಂಬುದರ ಬಗ್ಗೆ ಕೆ.ಅಶ್ರಫ್ ರವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಿದರು. ಈ ನಿಯೋಗದಲ್ಲಿ ಅಬ್ದುಲ್ ಜಲೀಲ್ ಅದ್ದು ಕೃಷ್ಣಾಪುರ, ಅಶ್ರಫ್ ಬದ್ರಿಯಾ, ಸಿ. ಎಮ್.ಮುಸ್ತಾಫಾ, ಷರೀಫ್, ಸಿರಾಜ್,ಹಕೀಮ್,ಶರೀಫ್ ಕೂಳೂರು, ನೌಫಲ್ ಮತ್ತು ಅರ್ಷದ್ ಕಂದಕ್ ಮತ್ತು ಸಂತ್ರಸ್ತ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ