ಔರಾದ: ನೀಟ್ ಪರೀಕ್ಷೆ ನಿಷ್ಪಕ್ಷಪಾತ ತನಿಖೆಗೆ ಯುವ ಕಾಂಗ್ರೆಸ್ ಅಧ್ಯಕ್ಷ  ಬಾಪೊರೆ ಆಗ್ರಹ

dattatri bapore
11/06/2024

ಔರಾದ: ನೀಟ್ ಪರೀಕ್ಷೆ ಫಲಿತಾಂಶದಲ್ಲಿ ಭಾರೀ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕದಲ್ಲಿ ಮೂಡಿರುವ ಆತಂಕಕ್ಕೆ ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ ಡಿಎ ಆಗಲಿ, ಕೇಂದ್ರದ ನರೆಂದ್ರ ಮೋದಿ ಯವರ ಸರ್ಕಾರದವಾಗಲಿ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ದತ್ತಾತ್ರಿ ಬಾಪೋರೆ ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷರು ಔರಾದ ಆರೋಪಿಸಿದ್ದಾರೆ.

ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿ ಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ ಶೇ.100 ಅಂಕ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‌ ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ ಎಂದರು.

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು. 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ, ಈ ವರ್ಷ 67 ವಿದ್ಯಾರ್ಥಿಗಳು ಟಾಪರ್ ಗಳಾಗಿ ಹೊರಹೊಮ್ಮಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋನಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕಗಳಿಸಿದ್ದು, ಅಸಾಧ್ಯ ಅನಿಸುತ್ತದೆ. ಇದು ಕಾಕತಾಳಿಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಕೇಂದ್ರ ಸರ್ಕಾರವೇ ಸ್ಪಷ್ಟಪಡಿಸಬೇಕು ಎಂದು ದತ್ತಾತ್ರಿ ಬಾಪೋರೆ ಯುವ ಕಾಂಗ್ರೆಸ್ ತಾಲೂಕ ಅಧ್ಯಕ್ಷರು ಔರಾದ ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version