ಪ್ರಹ್ಲಾದ್ ಜೋಶಿಯನ್ನು ಸಿಎಂ ಮಾಡಲು ಬಿಜೆಪಿಯ ಸಮರ್ಥ ನಾಯಕರಿಗೆ ಟಿಕೆಟ್ ನಿರಾಕರಣೆ!

ಬಿಜೆಪಿಯಲ್ಲಿ ಸಿಎಂ ಸ್ಥಾನಕ್ಕೆ ಸಮರ್ಥರಾಗಿರುವ ಅಭ್ಯರ್ಥಿಗಳಿಗೆ ಟಿಕೆಟ್ ನಿರಾಕರಿಸಲಾಗಿದೆ. ಇದರಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೈವಾಡ ಇದೆ. ಅವರಿಗೆ ಮುಖ್ಯಮಂತ್ರಿ ಸ್ಥಾನಕ್ಕೆ ಏರಲು ಅಡ್ಡಿಯಾಗಿರುವ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರ ರಾಜಕೀಯ ಭವಿಷ್ಯವನ್ನು ಮುಗಿಸುವ ಯತ್ನ ನಡೆದಿದೆ ಎಂದು ರಾಜ್ಯ ವಿಧಾನ ಸಭೆಯ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಆರೋಪಿಸಿದ್ದಾರೆ.
ಅವರು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಎಂಎಫ್ ಪ್ರಾಬಲ್ಯವನ್ನು ಕರ್ನಾಟಕದಲ್ಲಿ ಕುಗ್ಗಿಸಲು ಅಮುಲ್ಗೆ ಅವಕಾಶ ನೀಡುವುದಿಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದ ಹಾಲಿನ ಬ್ರಾಂಡ್ ನಂದಿನಿಯನ್ನು ಗುಜರಾತ್ ಮೂಲದ ಅಮೂಲ್ ಜೊತೆ ವಿಲೀನ ಮಾಡಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw