ಮಂಗಳೂರು: ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್

ಮಂಗಳೂರು, ದಕ್ಷಿಣ ಕನ್ನಡ: ಮಂಗಳೂರಿನ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡೀಪಾರು ನೋಟೀಸ್ ನೀಡಲಾಗಿದ್ದು, ನಿಮ್ಮನ್ನು ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿಗೊಳಿಸಲಾಗಿದೆ.
ನೋಟಿಸ್ ಪಡೆದವರು ಇಂದು ಕಾನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ. ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಸಾಧ್ಯತೆ ಇದೆ ಎನ್ನಲಾಗ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಿಂದ ಮೂವರು ಹಿಂದೂ ಕಾರ್ಯಕರ್ತರಿಗೆ ಗಡೀಪಾರಿಗೆ ಸಿದ್ದತೆ ನಡೆಸಲಾಗಿದೆ. ಇತ್ತೀಚೆಗೆ ನಡೆದ ಎರಡು ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಭಾಗಿಯಾಗಿದ್ದ ಮೂವರನ್ನು ಗಡಿಪಾರು ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ ಕೇಸ್ ಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ ಗಳು ಗಡೀಪಾರಿಗೆ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಅಧಿಕೃತವಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಇದೀಗ ನೋಟೀಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw