ಸಿಎಂ ವಿರುದ್ಧ ಅವಹೇಳನಾಕಾರಿ ಸಂದೇಶ: ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ವಿರುದ್ಧ ಪ್ರಕರಣ ದಾಖಲು

ಕಾರ್ಕಳ : ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಾಕಾರಿ ಸುಳ್ಳು ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಕಾರ್ಕಳ ತಾಲೂಕಿನ ಈದು ಗ್ರಾಮದ ನಿವಾಸಿ ಪ್ರಖ್ಯಾತ್ ಬಿ.ಜೆ. ವಾಟ್ಸ್ ಆಪ್, ಫೇಸ್ ಬುಕ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಿಎಂ ಸಿದ್ದರಾಮಯ್ಯ ಕುರಿತು ಸರಕಾರದ ಬೆಲೆ ಏರಿಕೆ ಬಿಸಿ ದೇವಸ್ಥಾನದ ಸೇವೆಗೂ ತಟ್ಟಿದೆ ಎಂದು ಸುಳ್ಳು ಸಂದೇಶ ಹಾಗೂ ಅವಹೇಳನಕಾರಿ ಪದಗಳನ್ನು ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಿ, ಸಮಾಜದ ಸ್ವಾಸ್ಥ ಕೆಡಿಸುತ್ತಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆತನ್ನು ಕೂಡಲೇ ವಿಚಾರಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿ ಕಾರ್ಕಳ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜೋಗಿ ದೂರಿನಲ್ಲಿ ತಿಳಿಸಿದ್ದಾರೆ.
ಇನ್ನೂ ಪತ್ರಕರ್ತರ ಬಗ್ಗೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಆರೋಪ ಕೂಡ ಕೇಳಿ ಬಂದಿದ್ದು, ಈ ಸಂಬಂಧ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಎಎಸ್ಪಿ ಅವರಿಗೆ ದೂರು ನೀಡಿ ಪ್ರಖ್ಯಾತ್ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD