ದೇಶಕ್ಕಾಗಿ ಈಶ್ವರಪ್ಪ, ಯಡಿಯೂರಪ್ಪ ತ್ಯಾಗ ಮಾಡಲಿ, ಹರ್ಷ ತಾಯಿಗೆ ಬಿಜೆಪಿ ಟಿಕೆಟ್ ನೀಡಲಿ | ಬಿಜೆಪಿ ನಾಯಕರ ತಲೆಕೆಡಿಸಿದ ಅಭಿಯಾನ - Mahanayaka
9:26 AM Thursday 23 - January 2025

ದೇಶಕ್ಕಾಗಿ ಈಶ್ವರಪ್ಪ, ಯಡಿಯೂರಪ್ಪ ತ್ಯಾಗ ಮಾಡಲಿ, ಹರ್ಷ ತಾಯಿಗೆ ಬಿಜೆಪಿ ಟಿಕೆಟ್ ನೀಡಲಿ | ಬಿಜೆಪಿ ನಾಯಕರ ತಲೆಕೆಡಿಸಿದ ಅಭಿಯಾನ

harsha
25/02/2022

ಶಿವಮೊಗ್ಗ: ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಡೆದುಕೊಂಡ ರೀತಿ ಸಾರ್ವಜನಿಕವಾಗಿ ಬಹಳಷ್ಟು ಪರ ವಿರೋಧಗಳ ಚರ್ಚೆಗಳಿಗೆ ಕಾರಣವಾಗಿದೆ. ಬಿಜೆಪಿ ಈ ಪ್ರಕರಣವನ್ನು ರಾಜಕೀಯವಾಗಿ ಬಳಕೆ ಮಾಡುತ್ತಿದೆ ಎನ್ನುವ ಮಾತುಗಳು, ಅಸಮಾಧಾನಗಳು ಕೇಳಿ ಬರುತ್ತಿರುವ ನಡುವೆಯೇ ಶಿವಮೊಗ್ಗ ಬಿಜೆಪಿ ನಾಯಕರಿಗೆ ಇದೀಗ ಹೊಸ ತಲೆನೋವೊಂದು ಕಾಡಲು ಆರಂಭವಾಗಿದೆ.

ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹರ್ಷ ಮನೆಗೆ ಭೇಟಿ ನೀಡಿದ್ದ ಹಿಂದೂ ಪರ ಸಂಘಟನೆಗಳ ಮುಖಂಡರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಎಲ್ಲರನ್ನೂ ಸಮಾಧಾನ ಪಡಿಸುವಷ್ಟರಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವೊಂದ ಆರಂಭವಾಗಿದ್ದು, ಈ ಬಾರಿ ಹರ್ಷ ತಾಯಿಗೆ ಶಿವಮೊಗ್ಗದಿಂದ ಬಿಜೆಪಿ ಟಿಕೆಟ್ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ.

ಬಿಜೆಪಿಯೇ ಹೇಳುತ್ತಿರುವಂತೆ, ಹರ್ಷ ದೇಶಕ್ಕೋಸ್ಕರ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಹಾಗೆಯೇ ಈಶ್ವರಪ್ಪ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬಸ್ಥರು ಹರ್ಷ ಕುಟುಂಬಕ್ಕಾಗಿ ತಮ್ಮ ಅಭ್ಯರ್ಥಿ ಸ್ಥಾನವನ್ನು ಹರ್ಷ ಅವರ ತಾಯಿಗೆ ನೀಡುವ ಮೂಲಕ ದೇಶ ಭಕ್ತಿ ಮೆರೆಯಬೇಕು ಎಂಬ ಒತ್ತಾಯಗಳು ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಲಂಚಕ್ಕೆ ಬೇಡಿಕೆ: ಆಯುಷ್​ ಅಧಿಕಾರಿ ಎಸಿಬಿ ಬಲೆಗೆ

ನಾವು ಅವರ ಹತ್ತು ಜನರನ್ನು ಹೊಡೆಯುತ್ತೇವೆ: ರಿಷಿಕುಮಾರ್ ಸ್ವಾಮೀಜಿಯಿಂದ ಮತ್ತೆ ವಿವಾದಾತ್ಮಕ ಹೇಳಿಕೆ

ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಕರ್ನಾಟಕದ ಮೂವರು ವಿದ್ಯಾರ್ಥಿಗಳು!

ರಷ್ಯಾ ದಾಳಿಗೆ ನಾಗರಿಕರು, ಸೈನಿಕರು ಸೇರಿ 137 ಮಂದಿ ಸಾವು: ಉಕ್ರೇನ್​

ಉಕ್ರೇನ್ ನಲ್ಲಿ ಸಿಲುಕಿದ್ದಾರೆ ಕರ್ನಾಟಕದ ಮೂವರು ವಿದ್ಯಾರ್ಥಿಗಳು!

ಇತ್ತೀಚಿನ ಸುದ್ದಿ