ಉಚ್ಛಾಟನೆಗೊಂಡರೂ “ನಾನು ಬಿಜೆಪಿಯಲ್ಲೇ ಇದ್ದೇನೆ” ಎಂದ ಈಶ್ವರಪ್ಪ!

ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸಿ ಬಿಜೆಪಿ ನಾಯಕರ ಬಗ್ಗೆ ಬೇಕಾಬಿಟ್ಟಿ ಹೇಳಿಕೆ ನೀಡಿದ್ದ ಈಶ್ವರಪ್ಪ ಬಳಿಕ ಹೀನಾಯವಾಗಿ ಸೋಲನುಭವಿಸಿದ್ದರು. ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದ್ದರೂ, ಇದೀಗ ಈಶ್ವರಪ್ಪ ತಾನು ಬಿಜೆಪಿಯಲ್ಲೇ ಈಗಲೂ ಇದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ಪ ಮಕ್ಕಳ ಕೈಯಲ್ಲಿ ಬಿಜೆಪಿ ಇರುವುದು ತಪ್ಪು. ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ಸ್ಪರ್ಧೆ ಮಾಡಿದ್ದೆ. ಮುಂದೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ. ಈ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು.
ಕಳೆದ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧಿಸಿ ಉಚ್ಛಾಟನೆಗೊಂಡಿದ್ದ ಈಶ್ವರಪ್ಪ ಸದ್ಯ ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ನಡುವೆ ನಾನು ಬಿಜೆಪಿಯಲ್ಲೇ ಇದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಹೈಕಮಾಂಡ್ ನೇಮಿಸಿದ್ದ ಬಿಜೆಪಿ ರಾಜ್ಯ ನಾಯಕತ್ವದ ಬಗ್ಗೆ ಅವಿಶ್ವಾಸ ವ್ಯಕ್ತಪಡಿಸಿದ್ದ ಈಶ್ವರಪ್ಪ, ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರನ್ನು ಸೋಲಿಸಿ ತನ್ನ ಪ್ರಭಾವ ತೋರಿಸಲು ಮುಂದಾಗಿದ್ದರು. ತಮ್ಮ ಪುತ್ರನಿಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಈಶ್ವರಪ್ಪ ತಿರುಗಿ ಬಿದ್ದಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97