4:53 AM Thursday 16 - October 2025

ಮೋದಿಯ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ: ಸಿಎಂ ಸಿದ್ದರಾಮಯ್ಯ ಗುಡುಗು

siddaramaiah
21/04/2024

ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ಮೋದಿ,ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದರೆ. ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ  ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ದೇವೇಗೌಡರ ವಿರುದ್ಧ ಗುಡುಗಿದ್ದಾರೆ.

ಕೋಲಾರ (ಬಂಗಾರಪೇಟೆ) ಯ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮಾತನಾಡಿದ ಅವರು,  ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?  ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ,  ಮೋದಿಯವರೇಕೆ  ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ?  ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ ಎಂದು ಸಿ.ಎಂ ಪ್ರಶ್ನಿಸಿದರು

ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ  ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದು ಸವಾಲು ಹಾಕಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದ ದೇವೇಗೌಡರು, ಮೋದಿ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ. ಈಗ ಇದೇ ದೇವೇಗೌಡರು ಮೋದಿಯವರ ಖಾಲಿ ಚೊಂಬನ್ನು ಅಕ್ಷಯ ಪಾತ್ರೆ ಎನ್ನುತ್ತಿದ್ದಾರೆ. ಆದ್ದರಿಂದ ಕೋಲಾರದಲ್ಲಿ ದೇವೇಗೌಡರು ಮತ್ತು ಮೋದಿಯವರ ಖಾಲಿ ಚೊಂಬನ್ನು ಸೋಲಿಸಿ ನಮ್ಮ ಗ್ಯಾರಂಟಿಗಳಿಗೆ ಆಶೀರ್ವದಿಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸಿ ಎಂದು ಸಿ.ಎಂ ಕರೆ ನೀಡಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version