ದೇವೇಗೌಡರ ಆಶೀರ್ವಾದದಿಂದ ಆನೆ ಬಲ ಬಂದಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರ ಆಶೀರ್ವಾದದಿಂದ ನಮಗೆ ಆನೆ ಬಲ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಬಿಜೆಪಿ ಜೆಡಿಎಸ್ ಸಮನ್ವಯ ಸಭೆಯ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಿತ್ತು, ಈ ಸಮ್ಮಿಲನ ಸುವರಣಾಕ್ಷರದಲ್ಲಿ ಬರೆದಿಡುವಂತಹ ಫಲಿತಾಂಶ ತರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಇದೇ ವೇಳೆ ಅವರು ಹೇಳಿದರು.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ್, ಎಂಎಲ್ಸಿ ಶರವಣ, ಸಂಸದ ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ಸಿ.ಟಿ.ರವಿ ಹಾಗೂ ಹಲವು ನಾಯಕರು ಭಾಗಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth