2:43 AM Friday 11 - September 2026

ದೇವೇಗೌಡರಿಗೆ ಅದ್ದೂರಿ ಸ್ವಾಗತ ನೀಡಿದ ಪ್ರಧಾನಿ ಮೋದಿ: ಫೋಟೋ ವೈರಲ್

modi devegowda
30/11/2021

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅದ್ದೂರಿಯಾಗಿ ಸ್ವಾಗತಿಸಿರುವ ಫೋಟೋಗಳು ಇದೀಗ ವೈರಲ್ ಆಗಿದ್ದು, ಮುಂದಿನ ವಿಧಾನಸಭಾ ಚುನಾವಣೆಗೆ ಮೈತ್ರಿಯ ಸಿದ್ಧತೆ ನಡೆದಿದೆಯೇ ಎನ್ನುವ ಪ್ರಶ್ನೆಗಳು ಕೂಡ ಈ ಚಿತ್ರಗಳ ಹಿಂದೆ ಕೇಳಿ ಬಂದಿವೆ.

ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ದೇವೇಗೌಡರು ಸಂಸತ್ತಿಗೆ ಆಗಮಿಸಿದ್ದರು. ಅಧಿವೇಶನ ಮುಗಿಸಿದ ಬಳಿಕ  ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವೇಗೌಡರು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿಯ ಹಲವು ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭೇಟಿಯ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, ದೇವೇಗೌಡರನ್ನು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ದೇವೇಗೌಡರ ಕೈ ಹಿಡಿದುಕೊಂಡು ಕರೆದುಕೊಂಡು ಹೋದ ಪ್ರಧಾನಿ ಮೋದಿ, ಅವರಿಗಾಗಿ ಮೀಸಲಿರಿಸಿದ್ದ ಆಸನದಲ್ಲಿ ಕೂರಿಸಿದ್ದಾರೆ. ನಗುಮೊಗದ ಈ ಭೇಟಿ ಇದೀಗ ನೆಟ್ಟಿಗರ ಚರ್ಚಾ ವಿಷಯವಾಗಿ ಮಾರ್ಪಟ್ಟಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ನವದಂಪತಿಗಳಿಂದ ಬಂಗಾಡಿ ಬೀಡಿಗೆ ವೀಳ್ಯದೆಲೆ ಸಮರ್ಪಣೆ: ತುಳುನಾಡಿನ ಅವಳಿ ವೀರರು ಕಾನದ—ಕಟದರು | ಸಂಚಿಕೆ: 08

ಲಸಿಕೆ ಹಾಕಲು ಬಂದಾಗ ಅಜ್ಜಿಯ ಮೈಮೇಲೆ ಬಂದ ದೇವರು | ತಹಶೀಲ್ದಾರ್ ಮಾಡಿದ ಉಪಾಯ ಏನು ಗೊತ್ತಾ?

ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ದೂರು ದಾಖಲು

ಹಿಂದೂಗಳ ಬೆಳವಣಿಗೆಯ ವಿರುದ್ಧ ಅಸಹನೆ ಬೆಳೆಯುತ್ತಿದೆ | ಪೇಜಾವರ ಶ್ರೀ

ಅಜ್ಜಿಯ ಜೊತೆಗೆ ಮದುವೆಗೆ ಬಂದಿದ್ದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಕಲ್ಯಾಣ ಮಂಟಪಕ್ಕೆ ಬೆಂಕಿ ಬಿದ್ದರೂ, ನಿಶ್ಚಿಂತೆಯಿಂದ ಊಟ ಮುಂದುವರಿಸಿದ ಅತಿಥಿಗಳು! ವಿಡಿಯೋ ವೈರಲ್

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti deneme bonusu veren siteler deneme bonusu veren siteler
Exit mobile version