ಶಬರಿಮಲೆಯಲ್ಲಿ ಕರ್ನಾಟಕ ಮೂಲದ ಭಕ್ತ ಸಾವಿಗೆ ಶರಣು!
17/12/2024
ರಾಮನಗರ: ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿನಿಂದ ಹಾರಿ ಕರ್ನಾಟಕ ಮೂಲದ ಅಯ್ಯಪ್ಪ ಭಕ್ತರೊಬ್ಬರು ಸಾವಿಗೆ ಶರಣಾಗಿರುವ ಘಟನೆ ನಡೆದಿದೆ.
ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್(40) ಸಾವಿಗೆ ಶರಣಾದ ವ್ಯಕ್ತಿಯಾಗಿದ್ದಾರೆ. ಕುಮಾರ್ ಗಾರೆ ಕೆಲಸ ಮಾಡಿಕೊಂಡಿದ್ದು, ಮೂರು ದಿನಗಳ ಹಿಂದೆ 6 ಮಂದಿಯ ಜೊತೆಗೆ ಶಬರಿಮಲೆಗೆ ತೆರಳಿದ್ದರು.
ಅಯ್ಯಪ್ಪ ದರ್ಶನದ ಬಳಿಕ ದೇವಾಲಯದ ಸ್ಕೈವಾಕ್ ಶೆಲ್ಟರ್ ನಿಂದ ಕೆಳಗೆ ಜಿಗಿದು ಸಾವಿಗೆ ಶರಣಾಗಿದ್ದಾರೆ. ದೇವಾಲಯದ ಮೇಲಿನಿಂದ ಕೆಳಗೆ ಜಿಗಿಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: