1:31 AM Wednesday 17 - September 2025

ಉಡುಪಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯ ಪಾಸ್ಕ ಜಾಗರಣೆ

faska
08/04/2023

ಉಡುಪಿ: ಯೇಸು ಕ್ರಿಸ್ತರು ಶಿಲುಬೆಗೇರಿ ಪುನರುತ್ಥಾನರಾದ ಈಸ್ಟರ್ ಜಾಗರಣೆ ಶನಿವಾರ ರಾತ್ರಿ ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಜರುಗಿತು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಸಂಭ್ರಮದಿಂದ ನಡೆಯಿತು. ಈ ಸಂದರ್ಭದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ|ವಲೇರಿಯನ್‌ ಮೆಂಡೊನ್ಸಾ, ಸಹಾಯಕ ಧರ್ಮಗುರು ವಂ. ಜೋಯ್‌ ಅಂದ್ರಾದೆ, ಪಿಲಾರ್ ಸಭೆಯ ವಂ ಡೆನ್ಜಿಲ್ ಮಾರ್ಟಿಸ್, ವಂ ನಿತೇಶ್ ಡಿ’ಸೋಜ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೃಹತ್‌ ಗಾತ್ರದ ಈಸ್ಟರ್‌ ಕ್ಯಾಂಡಲ್‌ ಹಚ್ಚಿ ಮೆರವಣಿಗೆಯಲ್ಲಿ ಸಾಗಿ ಬಂದು ಚರ್ಚ್‌ನ ಪ್ರಧಾನ ಸ್ಥಳದಲ್ಲಿ ಪ್ರತಿಷ್ಠಾಪಿಸಲಾಯಿತು. ಬಳಿಕ ಹಳೆ ಹಾಗೂ ಹೊಸ ಒಡಂಬಡಿಕೆಯ ಆಯ್ದ ಭಾಗಗಳ ವಾಚನ ಮಾಡಲಾಯಿತು. ಧರ್ಮಾಧ್ಯಕ್ಷ ರು ಮತ್ತು ಧರ್ಮಗುರುಗಳು ಹೊಸ ನೀರನ್ನು ಆಶೀರ್ವಚನ ನೆರವೇರಿಸಿ ನೆರೆದ ಭಕ್ತಾದಿಗಳ ಮೇಲೆ ಪ್ರೋಕ್ಷಿಸಿ ಆಶೀರ್ವಾದಿಸಿದರು.

ಬಳಿಕ ನಡೆದ ಬಲಿಪೂಜೆಯಲ್ಲಿ ಯೇಸುವಿನ ಕಷ್ಟಗಳು, ಪುನರುತ್ಥಾನದ ಸಂದೇಶವನ್ನು ವಿವರಿಸಿದ ಧರ್ಮಗುರುಗಳು, ಕ್ರೈಸ್ತ ವಿಶ್ವಾಸ, ಸತ್ಯದ ಮರು ದೃಡೀಕರಣ ನಡೆಸಿದರು. ಬಲಿಪೂಜೆಯ ಬಳಿಕ ಭಾಗವಹಿಸಿದ ಕ್ರೈಸ್ತ ಬಾಂಧವರು ಈಸ್ಟರ್ ಹಬ್ಬದ ಶುಭಾಶಯ ಮಾಡಿ ಸಂಭ್ರಮಿಸಿದರು.

ಕ್ರೈಸ್ತರು ವಿಭೂತಿ ಬುಧವಾರದಿಂದ ಆರಂಭಿಸಿ 40 ದಿನಗಳ ಉಪವಾಸ ವ್ರತ ಹಾಗೂ ಧ್ಯಾನದಲ್ಲಿ ಯೇಸುವಿನ ಕಷ್ಟಗಳನ್ನು ನೆನೆದು ಈಸ್ಟರ್ ಹಬ್ಬದಂದು ಯೇಸುವಿನ ಪುನರುತ್ಥಾನಗೊಳ್ಳವುದರ ಮೂಲಕ ತಿಂಗಳ ಕಷ್ಟಗಳ ತಪಸ್ಸಿಗೆ ಕೊನೆ ಹೇಳುತ್ತಾರೆ. ಈಸ್ಟರ್ ಹಬ್ಬವೂ ಕೂಡ ಕ್ರಿಸ್ಮಸ್ ಹಬ್ಬದಂತೆ ಕ್ರೈಸ್ತರಿಗೆ ಪ್ರಮುಖ ಹಬ್ಬವಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version