10:24 AM Thursday 22 - January 2026

ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಮೇಲೆ ಧರ್ಮದ ಹೆಸರಿನಲ್ಲಿ ಗೂಂಡಾಗಿರಿ | 5 ಮಂದಿಯ ವಿರುದ್ಧ ದೂರು

karinja tempel
27/08/2021

ಮಂಗಳೂರು: ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿಗಳನ್ನು ತಡೆದು ಗೂಂಡಾಗಿರಿ ನಡೆಸಿರುವ ಬಗ್ಗೆ ವಿದ್ಯಾರ್ಥಿನಿಯೋರ್ವಳು ಪೂಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡದ್ದು, 5 ಮಂದಿಯಿದ್ದ ಸಂಘಪರಿವಾರದ ಕಾರ್ಯಕರ್ತರೆನ್ನಲಾದ ಯುವಕರ ಮೇಲೆ ದೂರು ದಾಖಲಾಗಿದೆ ಎಂದು ವರದಿಯಾಗಿದೆ.

ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿರುವ ಮೂವರು ವಿದ್ಯಾರ್ಥಿನಿಯರು ಹಾಗೂ  ಮೂವರು ವಿದ್ಯಾರ್ಥಿಗಳು ಕಾರಿಂಜ ದೇವಸ್ಥಾನಕ್ಕೆ ಪ್ರವಾಸಕ್ಕೆಂದು ಬಂದಿದ್ದರು ಎನ್ನಲಾಗಿದೆ. ದೇವಸ್ಥಾನದ ಪರಿಸರದಲ್ಲಿ ಫೋಟೋ ತೆಗೆದುಕೊಂಡು ವಾಪಸ್ ಆಗುತ್ತಿದ್ದ ವೇಳೆ 5 ಮಂದಿ ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳ ತಂಡದಲ್ಲಿ ಹಿಂದೂ ಮತ್ತು ಮುಸ್ಲಿಮ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿದ್ದು, ಹಾಗಾಗಿ ಸಂಘಪರಿವಾರದ ಕಾರ್ಯಕರ್ತರೆನ್ನಲಾಗಿರುವ ಯುವಕರು ವಿದ್ಯಾರ್ಥಿಗಳ ಮೇಲೆ ಗೂಂಡಾಗಿರಿ ನಡೆಸಿದ್ದಾರೆನ್ನಲಾಗುತ್ತಿದೆ. ಈ ವೇಳೆ ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಆಗಮಿಸಿ, ವಿದ್ಯಾರ್ಥಿಗಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ವಿದ್ಯಾರ್ಥಿನಿಯೋರ್ವಳು ಪೊಲೀಸರಿಗೆ ದೂರು ನೀಡಿದ್ದು 5 ಮಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಸುದ್ದಿಗಳು…

ಮೈಸೂರು ಗ್ಯಾಂಗ್ ರೇಪ್  ಆರೋಪಿಗಳ ಸುಳಿವು ಲಭ್ಯ | ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕೃತ್ಯ?

ಮೈಸೂರು: ಸಾಮೂಹಿಕ ಅತ್ಯಾಚಾರ ಪ್ರಕರಣ | ಸಂತ್ರಸ್ತೆ, ಪೋಷಕರು ತನಿಖೆಗೆ ಸಹಕಾರ ನೀಡುತ್ತಿಲ್ಲ- ಎಸ್.ಟಿ.ಸೋಮಶೇಖರ್

ಆ ಹುಡುಗಿ ಅಷ್ಟೊತ್ತಿಗೆ ಅಲ್ಲಿಗೆ ಏಕೆ ಹೋಗಿದ್ದಳೋ? | ಗ್ಯಾಂಗ್ ರೇಪ್  ಬಗ್ಗೆ ಮಂಜುಳಾ ಮಾನಸ ಉಡಾಫೆ ಮಾತುಗಳು

ಕಾಬುಲ್ ವಿಮಾನ ನಿಲ್ದಾಣದಲ್ಲಿ ಭಾರೀ ಸ್ಫೋಟ | ಸಾಕಷ್ಟು ಜನರು ಅಪಾಯಕ್ಕೆ ಸಿಲುಕಿರುವ ಶಂಕೆ

ಕಾನೂನು ಸುವ್ಯವಸ್ಥೆ ಹತೋಟಿಗೆ ಬರಲಿ ಎಂದು ಚಾಮುಂಡಿಯನ್ನು ಬೇಡಿದ್ದೇನೆ ಎಂದ ಗೃಹ ಸಚಿವ ಅರಗ ಜ್ಞಾನೇಂದ್ರ!

ಸುದ್ದಿ ಪ್ರಸಾರ ಮಾಡುವುದಾಗಿ ಬ್ಲ್ಯಾಕ್ ಮೇಲ್ | ವರದಿಗಾರ ಸೇರಿದಂತೆ 6 ಮಂದಿ ಅರೆಸ್ಟ್

ಪತ್ನಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದ | ಕೊನೆಗೂ ಬಯಲಾಯ್ತು ಪತಿಯ ಹೇಯ ಕೃತ್ಯ

ಇತ್ತೀಚಿನ ಸುದ್ದಿ

Exit mobile version