ಧರ್ಮಸ್ಥಳ: ಅನನ್ಯ ಭಟ್ ನಾಪತ್ತೆ ಪ್ರಕರಣ: ದೂರಿನ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ ಕೆ.

Mahanayaka–ಮಂಗಳೂರು: 2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣದ ಬಗ್ಗೆ ಹೆತ್ತವರು ದೂರು ನೀಡಿದ್ದಾರೆ, ದೂರಿನ ವಿಚಾರಣೆ ನಡೆಸಿ, ಕ್ರಮಕೈಗೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ಅನನ್ಯ ಭಟ್ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರನೆ ನಡೆಸಿ, ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆ ತಿಳಿಸಿದೆ.
2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ನಾಪತ್ತೆಯಾಗಿದ್ದಳು. ಸದ್ಯ ತಾಯಿ ಈ ಬಗ್ಗೆ ದೂರು ನೀಡಿದ್ದಾರೆ. ಮಗಳ ಅಸ್ಥಿ ಸಿಕ್ಕಿದರೆ ಸಂಪ್ರದಾಯ ಪ್ರಕಾರ ಅಂತ್ಯಕ್ರಿಯೆ ನಡೆಸಬೇಕು ಎನ್ನುವ ಯೋಚನೆಯಲ್ಲಿ ಹೊರಟಿದ್ದೇನೆ, ನನಗೆ ಈಗ ಬೇರೇನೂ ಉಳಿದಿಲ್ಲ, ಮಗಳು ನಾಪತ್ತೆ ಪ್ರಕರಣದಲ್ಲಿ ನ್ಯಾಯ ದೊರಕಬೇಕು ಎಂದು ತಾಯಿ ಸುಜಾತ ಭಟ್ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: