10:03 PM Saturday 6 - September 2025

ಧರ್ಮಸ್ಥಳ ಪ್ರಕರಣ: ಧರ್ಮ ಜಾಗೃತಿ ಸಮಾವೇಶದಲ್ಲಿ ಕೈಕೊಂಡ 8 ನಿರ್ಣಯಗಳು!

dharma jagruti
06/09/2025

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪರ  ಧರ್ಮ ಜಾಗೃತಿ ಸಮಾವೇಶ ನಡೆಸಲಾಗಿತ್ತು. ಈ ಸಮಾವೇಶದಲ್ಲಿ 8 ನಿರ್ಣಯಗಳನ್ನು  ಕೈಗೊಳ್ಳಲಾಗಿದೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರದ ಗೃಹ ಸಚಿವರಿಗೆ ಮನವಿ ನೀಡುವ ನಿರ್ಧಾರ.

ಅಪಪ್ರಚಾರ ಮತ್ತು ಸುಳ್ಳು ಸುದ್ಧಿಯನ್ನು ಹಬ್ಬಿಸಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವ ಯ್ಯೂಟ್ಯೂಬರ್ ಗಳ ವಿರುದ್ಧ ಮತ್ತು ಯ್ಯೂಟ್ಯೂಬ್ ಚ್ಯಾನಲ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ.

SIT ರಚಿಸಿದಕ್ಕೆ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಲು ನಿರ್ಣಯ.

ಧರ್ಮಸ್ಥಳ ಮತ್ತು ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಸಾಮಾಜಿಕ ಜಾಲತಾಣ ಮೂಲಕ ನಡೆಯುತ್ತಿರುವ ಸುಳ್ಳು ಪ್ರಚಾರಕ್ಕೆ ಖಂಡನೆ‌.

ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಮಾಡುವ ಹೇಳಿಕೆಯನ್ನು ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಮತ್ತು ಅವರ ಹಿಂದೆ ನಿಂತು ಅವರಿಗೆ ಸಹಕಾರ ನೀಡುತ್ತಿರುವ ವ್ಯಕ್ತಿ,ಸಂಘ ಸಂಸ್ಥೆಗಳ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಈ ಸಭೆಯ ಮೂಲಕ ಒತ್ತಾಯ.

ಶ್ರದ್ದಾ ಕೇಂದ್ರಗಳ ವಿರುದ್ಧ, ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತು ಧಾರ್ಮಿಕ ಮುಖಂಡರ ವಿರುದ್ಧ ವ್ಯವಸ್ಥಿತ ಷಡ್ಯಂತ್ರಗಳು ಮುಂದಿನ ದಿನಗಳಲ್ಲಿ ನಡೆದರೆ ಎಲ್ಲಾ ಧಾರ್ಮಿಕ ಮುಖಂಡರು ಸಂಘಟಿತರಾಗಿ, ಸಮರ್ಥ ಯೋಜನೆಯನ್ನು ರೂಪಿಸಿ, ಅದರ ವಿರುದ್ಧ ಹೋರಾಡಲು ನಿರ್ಣಯ.

ಸಂಘಟನಾ ದೃಷ್ಟಿಯಿಂದ ಈ ಧರ್ಮ ಜಾಗೃತಿ ಸಮಿತಿಯನ್ನು ಇನ್ನಷ್ಟು ಬಲಪಡಿಸಿ ವರ್ಷಕ್ಕೆ ಒಂದು ಬಾರಿಯಾದರೂ ಈ ರೀತಿಯ ಸಮಾವೇಶವನ್ನು ಆಯೋಜಿಸಿ ಸೂಕ್ತ ಕಾರ್ಯಯೋಜನೆಗಳನ್ನು ರೂಪಿಸಲು ನಿರ್ಣಯ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢವಾಗಿ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂಬ ತೀರ್ಮಾನ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version