12:33 PM Sunday 16 - November 2025

ಧರ್ಮಸ್ಥಳ ಪ್ರಕರಣ: ಎಸ್ ಐಟಿ ಅಧಿಕಾರಿಗಳ ವಿರುದ್ಧವೇ ದೂರು ದಾಖಲು!

jayanth t
16/11/2025

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂದಿಸಿದಂತೆ ಎಸ್ ಐಟಿ ತನಿಖೆ ನಡೆಸಲಾಗುತ್ತಿದೆ. ಇದೀಗ ಎಸ್ ಐಟಿ ಅಧಿಕಾರಿಗಳ ವಿರುದ್ಧವೇ  ಬೆಳ್ತಂಗಡಿ ಠಾಣೆಗೆ ಸೌಜನ್ಯಪರ ಹೋರಾಟಗಾರ ಜಯಂತ್ ಟಿ. ದೂರು ನೀಡಿದ್ದಾರೆ.

ಎಸ್ ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ ಪಿ ಆರ್.ಜಿ. ಮಂಜುನಾಥ್, ಇನ್ಸ್ ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ ಪೆಕ್ಟರ್ ಗುಣಪಾಲ ವಿರುದ್ಧ ದೂರು ನೀಡಲಾಗಿದೆ.

ಸುಳ್ಳು ಸಾಕ್ಷಿ ಹೇಳುವಂತೆ ಒತ್ತಾಯ ಹೇರಿ ದೈಹಿಕ ಹಲ್ಲೆ, ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ ನಡೆಸಲಾಗಿದೆ. ಕಾನೂನು ಬಾಹಿರ ಕೃತ್ಯ, ಸರ್ಕಾರಿ ಆದೇಶ ಪಾಲಿಸದೇ ಕರ್ತವ್ಯ ಲೋಪ ಎಸಗಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನೂ ಎಸ್ ಐಟಿ ಅಧಿಕಾರಿಗಳು ತನ್ನನ್ನು ವಿಚಾರಣೆ ನೆಪದಲ್ಲಿ ಕರೆದು ಹಲ್ಲೆ ನಡೆಸಿದ್ದಾರಲ್ಲದೇ, ಬೆದರಿಕೆ ಹಾಕಿದ್ದಾರೆ ಎಂದು ಜಯಂತ್ ಟಿ. ರಾಜ್ಯಪಾಲರು ಹಾಗೂ ಪೊಲೀಸ್ ಮಹಾ ನಿರ್ದೇಶಕರಿಗೂ ದೂರು ನೀಡಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version