ಧರ್ಮಸ್ಥಳ ಪ್ರಕರಣ: ನಾಳೆ ಸಂಪೂರ್ಣ ಉತ್ತರ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಚಾಮರಾಜನಗರ: ಧರ್ಮಸ್ಥಳ ಪ್ರಕರಣದ ಬಗ್ಗೆ ನಾಳೆ ಸದನದಲ್ಲಿ ಸಂಪೂರ್ಣ ಉತ್ತರ ನೀಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಗುಂಡ್ಲುಪೇಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಯಾರೂ ರಾಜಕಾರಣ ಮಾಡಬಾರದು, ಇದು ನ್ಯಾಯ ಹಾಗೂ ಕಾನೂನಿಗೆ ಸಂಬಂಧಪಟ್ಟ ವಿಚಾರವಾಗಿದೆ ಎಂದು ಅವರು ಹೇಳಿದರು.
ಯಾರಾದರೂ ದೂರು ಕೊಟ್ಟರೆ, ಕಂಪ್ಲೈಂಟ್ ತೆಗೆದುಕೊಂಡು ಎಫ್ ಐ ಆರ್ ಮಾಡಿ ತನಿಖೆ ನಡೆಸುವುದು ಸಹಜ, ನಾವು ಇದರಲ್ಲಿ ರಾಜಕೀಯ ಹಾಗೂ ಧರ್ಮವನ್ನು ಸೇರಿಸಬಾರದು ಎಂದು ಪರಮೇಶ್ವರ್ ಹೇಳಿದರು.
ಎಸ್ ಐಟಿ ನಡೆಯುತ್ತಿದೆ, ತನಿಖೆ ಅಂತಿಮವಾಗಲಿ. ಸತ್ಯಾಸತ್ಯತೆ ತನಿಖೆಯಿಂದ ಹೊರ ಬರಬೇಕಿದೆ. ಅದು ಬಿಟ್ಟು ರಾಜಕೀಯ ಮಾಡುವುದು, ಧಾರ್ಮಿಕ ವಿಚಾರ ಎಳೆದು ತರುವುದು ಸರಿಯಲ್ಲ ಎಂದು ಪರಮೇಶ್ವರ್ ವಿಪಕ್ಷಗಳ ನಡೆಯನ್ನು ಟೀಕಿಸಿದರು.
ಎಸ್.ಐ.ಟಿ ಮದ್ಯಂತರ ವರದಿ ಕುರಿತು ಅಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಸರ್ಕಾರ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆತ ಹೇಳಿದ ಹಾಗೆ ಅಗೆಯುತ್ತಾ ಕೂರುವುದಕ್ಕೆ ಆಗಲ್ಲ. ಎಸ್ ಐಟಿ ಅಧಿಕಾರಿಗಳು ಎಲ್ಲವನ್ನೂ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD